< 申命記 13 >
1 あなたがたのうちに預言者または夢みる者が起って、しるしや奇跡を示し、
೧ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,
2 あなたに告げるそのしるしや奇跡が実現して、あなたがこれまで知らなかった『ほかの神々に、われわれは従い仕えよう』と言っても、
೨“ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.
3 あなたはその預言者または夢みる者の言葉に聞き従ってはならない。あなたがたの神、主はあなたがたが心をつくし、精神をつくして、あなたがたの神、主を愛するか、どうかを知ろうと、このようにあなたがたを試みられるからである。
೩ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
4 あなたがたの神、主に従って歩み、彼を恐れ、その戒めを守り、その言葉に聞き従い、彼に仕え、彼につき従わなければならない。
೪ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
5 その預言者または夢みる者を殺さなければならない。あなたがたをエジプトの国から導き出し、奴隷の家からあがなわれたあなたがたの神、主にあなたがたをそむかせ、あなたの神、主が歩めと命じられた道を離れさせようとして語るゆえである。こうしてあなたがたのうちから悪を除き去らなければならない。
೫ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
6 同じ母に生れたあなたの兄弟、またはあなたのむすこ、娘、またはあなたのふところの妻、またはあなたと身命を共にする友が、ひそかに誘って『われわれは行って他の神々に仕えよう』と言うかも知れない。これはあなたも先祖たちも知らなかった神々、
೬ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
7 すなわち地のこのはてから、地のかのはてまで、あるいは近く、あるいは遠く、あなたの周囲にある民の神々である。
೭ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ
8 しかし、あなたはその人に従ってはならない。その人の言うことを聞いてはならない。その人をあわれんではならない。その人を惜しんではならない。その人をかばってはならない。
೮ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.
9 必ず彼を殺さなければならない。彼を殺すには、あなたがまず彼に手を下し、その後、民がみな手を下さなければならない。
೯ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.
10 彼はエジプトの国、奴隷の家からあなたを導き出されたあなたの神、主からあなたを離れさせようとしたのであるから、あなたは石をもって彼を撃ち殺さなければならない。
೧೦ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
11 そうすればイスラエルは皆聞いて恐れ、重ねてこのような悪い事を、あなたがたのうちに行わないであろう。
೧೧ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.
12 あなたの神、主があなたに与えて住まわせられる町の一つで、
೧೨ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ,
13 よこしまな人々があなたがたのうちに起って、あなたがたの知らなかった『ほかの神々に、われわれは行って仕えよう』と言って、その町に住む人々を誘惑したことを聞くならば、
೧೩ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,
14 あなたはそれを尋ね、探り、よく問いたださなければならない。そして、そのような憎むべき事があなたがたのうちに行われた事が、真実で、確かならば、
೧೪ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು
15 あなたは必ず、その町に住む者をつるぎの刃にかけて撃ち殺し、その町と、そのうちにおるすべての者、およびその家畜をつるぎの刃にかけて、ことごとく滅ぼさなければならない。
೧೫ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.
16 またそのすべてのぶんどり物は、町の広場の中央に集め、火をもってその町と、すべてのぶんどり物とを、ことごとく焼いて、あなたの神、主にささげなければならない。これはながく荒塚となって、再び建て直されないであろう。
೧೬ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
17 そののろわれた物は一つもあなたの手に留めおいてはならない。主が激しい怒りをやめ、あなたに慈悲を施して、あなたをあわれみ、先祖たちに誓われたように、あなたの数を多くされるためである。
೧೭“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.
18 あなたの神、主の言葉に聞き従い、わたしが、きょう、命じるすべての戒めを守り、あなたの神、主が正しいと見られる事を行うならば、このようになるであろう。
೧೮ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.