< 申命記 15 >
1 あなたは七年の終りごとに、ゆるしを行わなければならない。
೧ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.
2 そのゆるしのしかたは次のとおりである。すべてその隣人に貸した貸主はそれをゆるさなければならない。その隣人または兄弟にそれを督促してはならない。主のゆるしが、ふれ示されたからである。
೨ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.
3 外国人にはそれを督促することができるが、あなたの兄弟に貸した物はゆるさなければならない。
೩ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
4 しかしあなたがたのうちに貧しい者はなくなるであろう。(あなたの神、主が嗣業として与えられる地で、あなたを祝福されるからである。)
೪ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,
5 ただ、あなたの神、主の言葉に聞き従って、わたしが、きょう、あなたに命じることの戒めを、ことごとく守り行うとき、そのようになるであろう。
೫ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
6 あなたの神、主が約束されたようにあなたを祝福されるから、あなたは多くの国びとに貸すようになり、借りることはないであろう。またあなたは多くの国びとを治めるようになり、彼らがあなたを治めることはないであろう。
೬ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.
7 あなたの神、主が賜わる地で、もしあなたの兄弟で貧しい者がひとりでも、町の内におるならば、その貧しい兄弟にむかって、心をかたくなにしてはならない。また手を閉じてはならない。
೭ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
8 必ず彼に手を開いて、その必要とする物を貸し与え、乏しいのを補わなければならない。
೮ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.
9 あなたは心に邪念を起し、『第七年のゆるしの年が近づいた』と言って、貧しい兄弟に対し、物を惜しんで、何も与えないことのないように慎まなければならない。その人があなたを主に訴えるならば、あなたは罪を得るであろう。
೯ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
10 あなたは心から彼に与えなければならない。彼に与える時は惜しんではならない。あなたの神、主はこの事のために、あなたをすべての事業と、手のすべての働きにおいて祝福されるからである。
೧೦ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
11 貧しい者はいつまでも国のうちに絶えることがないから、わたしは命じて言う、『あなたは必ず国のうちにいるあなたの兄弟の乏しい者と、貧しい者とに、手を開かなければならない』。
೧೧ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
12 もしあなたの兄弟であるヘブルの男、またはヘブルの女が、あなたのところに売られてきて、六年仕えたならば、第七年には彼に自由を与えて去らせなければならない。
೧೨ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.
13 彼に自由を与えて去らせる時は、から手で去らせてはならない。
೧೩ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.
14 群れと、打ち場と、酒ぶねのうちから取って、惜しみなく彼に与えなければならない。すなわちあなたの神、主があなたを恵まれたように、彼に与えなければならない。
೧೪ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.
15 あなたはかつてエジプトの国で奴隷であったが、あなたの神、主があなたをあがない出された事を記憶しなければならない。このゆえにわたしは、きょう、この事を命じる。
೧೫ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.
16 しかしその人があなたと、あなたの家族を愛し、あなたと一緒にいることを望み、『わたしはあなたを離れて去りたくありません』と言うならば、
೧೬ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,
17 あなたは、きりを取って彼の耳を戸に刺さなければならない。そうすれば、彼はいつまでもあなたの奴隷となるであろう。女奴隷にもそうしなければならない。
೧೭ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.
18 彼に自由を与えて去らせる時には、快く去らせなければならない。彼が六年間、賃銀を取る雇人の二倍あなたに仕えて働いたからである。あなたがそうするならば、あなたの神、主はあなたが行うすべての事にあなたを祝福されるであろう。
೧೮ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.
19 牛、羊の産む雄のういごは皆あなたの神、主に聖別しなければならない。牛のういごを用いてなんの仕事をもしてはならない。また羊のういごの毛を切ってはならない。
೧೯ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
20 あなたの神、主が選ばれる所で、主の前にあなたは家族と共に年ごとにそれを食べなければならない。
೨೦ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
21 しかし、その獣がもし傷のあるもの、すなわち足なえまたは、めくらなど、すべて悪い傷のあるものである時は、あなたの神、主にそれを犠牲としてささげてはならない。
೨೧ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.
22 町の内でそれを食べなければならない。汚れた人も、清い人も、かもしかや、雄じかと同様にそれを食べることができる。
೨೨ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.
23 ただし、その血は食べてはならない。水のようにそれを地にそそがなければならない。
೨೩ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.