< 申命記 17 >
1 すべて傷があり、欠けた所のある牛または羊はあなたの神、主にささげてはならない。そのようなものはあなたの神、主の忌みきらわれるものだからである。
೧ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
2 あなたの神、主が賜わる町で、あなたがたのうちに、もし男子または女子があなたの神、主の前に悪事をおこなって、契約にそむき、
೨ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,
3 行って他の神々に仕え、それを拝み、わたしの禁じる、日や月やその他の天の万象を拝むことがあり、
೩ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
4 その事を知らせる者があって、あなたがそれを聞くならば、あなたはそれをよく調べなければならない。そしてその事が真実であり、そのような憎むべき事が確かにイスラエルのうちに行われていたならば、
೪ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,
5 あなたはその悪事をおこなった男子または女子を町の門にひき出し、その男子または女子を石で撃ち殺さなければならない。
೫ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
6 ふたりの証人または三人の証人の証言によって殺すべき者を殺さなければならない。ただひとりの証人の証言によって殺してはならない。
೬ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
7 そのような者を殺すには、証人がまず手を下し、それから民が皆、手を下さなければならない。こうしてあなたのうちから悪を除き去らなければならない。
೭ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
8 町の内に訴え事が起り、その事件がもし血を流す事、または権利を争う事、または人を撃った事などであって、あなたが、さばきかねるものである時は、立ってあなたの神、主が選ばれる場所にのぼり、
೮ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
9 レビびとである祭司と、その時の裁判人とに行って尋ねなければならない。彼らはあなたに判決の言葉を告げるであろう。
೯ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
10 あなたは、主が選ばれるその場所で、彼らが告げる言葉に従っておこない、すべて彼らが教えるように守り行わなければならない。
೧೦ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
11 すなわち彼らが教える律法と、彼らが告げる判決とに従って行わなければならない。彼らが告げる言葉にそむいて、右にも左にもかたよってはならない。
೧೧ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.
12 もし人がほしいままにふるまい、あなたの神、主の前に立って仕える祭司または裁判人に聞き従わないならば、その人を殺して、イスラエルのうちから悪を除かなければならない。
೧೨ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
13 そうすれば民は皆、聞いて恐れ、重ねてほしいままにふるまうことをしないであろう。
೧೩ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.
14 あなたの神、主が賜わる地に行き、それを獲てそこに住むようになる時、もしあなたが『わたしも周囲のすべての国びとのように、わたしの上に王を立てよう』と言うならば、
೧೪ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
15 必ずあなたの神、主が選ばれる者を、あなたの上に立てて王としなければならない。同胞のひとりを、あなたの上に立てて王としなければならない。同胞でない外国人をあなたの上に立ててはならない。
೧೫ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.
16 王となる人は自分のために馬を多く獲ようとしてはならない。また馬を多く獲るために民をエジプトに帰らせてはならない。主はあなたがたにむかって、『この後かさねてこの道に帰ってはならない』と仰せられたからである。
೧೬ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
17 また妻を多く持って心を、迷わしてはならない。また自分のために金銀を多くたくわえてはならない。
೧೭ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
18 彼が国の王位につくようになったら、レビびとである祭司の保管する書物から、この律法の写しを一つの書物に書きしるさせ、
೧೮ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.
19 世に生きながらえる日の間、常にそれを自分のもとに置いて読み、こうしてその神、主を恐れることを学び、この律法のすべての言葉と、これらの定めとを守って行わなければならない。
೧೯ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
20 そうすれば彼の心が同胞を見くだして、高ぶることなく、また戒めを離れて、右にも左にも曲ることなく、その子孫と共にイスラエルにおいて、長くその位にとどまることができるであろう。
೨೦ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.