< 申命記 4 >
1 イスラエルよ、いま、わたしがあなたがたに教える定めと、おきてとを聞いて、これを行いなさい。そうすれば、あなたがたは生きることができ、あなたがたの先祖の神、主が賜わる地にはいって、それを自分のものとすることができよう。
೧ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
2 わたしがあなたがたに命じる言葉に付け加えてはならない。また減らしてはならない。わたしが命じるあなたがたの神、主の命令を守ることのできるためである。
೨ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
3 あなたがたの目は、主がバアル・ペオルで行われたことを見た。ペオルのバアルに従った人々は、あなたの神、主がことごとく、あなたのうちから滅ぼしつくされたのである。
೩ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.
4 しかし、あなたがたの神、主につき従ったあなたがたは皆、きょう、生きながらえている。
೪ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.
5 わたしはわたしの神、主が命じられたとおりに、定めと、おきてとを、あなたがたに教える。あなたがたがはいって、自分のものとする地において、そのように行うためである。
೫ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
6 あなたがたは、これを守って行わなければならない。これは、もろもろの民にあなたがたの知恵、また知識を示す事である。彼らは、このもろもろの定めを聞いて、『この大いなる国民は、まことに知恵あり、知識ある民である』と言うであろう。
೬ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
7 われわれの神、主は、われわれが呼び求める時、つねにわれわれに近くおられる。いずれの大いなる国民に、このように近くおる神があるであろうか。
೭ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?
8 また、いずれの大いなる国民に、きょう、わたしがあなたがたの前に立てるこのすべての律法のような正しい定めと、おきてとがあるであろうか。
೮ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?
9 ただあなたはみずから慎み、またあなた自身をよく守りなさい。そして目に見たことを忘れず、生きながらえている間、それらの事をあなたの心から離してはならない。またそれらのことを、あなたの子孫に知らせなければならない。
೯ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
10 あなたがホレブにおいて、あなたの神、主の前に立った日に、主はわたしに言われた、『民をわたしのもとに集めよ。わたしは彼らにわたしの言葉を聞かせ、地上に生きながらえる間、彼らにわたしを恐れることを学ばせ、またその子供を教えることのできるようにさせよう』。
೧೦ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
11 そこであなたがたは近づいて、山のふもとに立ったが、山は火で焼けて、その炎は中天に達し、暗黒と雲と濃い雲とがあった。
೧೧ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.
12 時に主は火の中から、あなたがたに語られたが、あなたがたは言葉の声を聞いたけれども、声ばかりで、なんの形も見なかった。
೧೨ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.
13 主はその契約を述べて、それを行うように、あなたがたに命じられた。それはすなわち十誡であって、主はそれを二枚の石の板に書きしるされた。
೧೩ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
14 その時、主はわたしに命じて、あなたがたに定めと、おきてとを教えさせられた。あなたがたが渡って行って自分のものとする地で、行わせるためであった。
೧೪ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
15 それゆえ、あなたがたはみずから深く慎まなければならない。ホレブで主が火の中からあなたがたに語られた日に、あなたがたはなんの形も見なかった。
೧೫ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.
16 それであなたがたは道を誤って、自分のために、どんな形の刻んだ像をも造ってはならない。男または女の像を造ってはならない。
೧೬ನೀವು ಸ್ತ್ರೀಪುರುಷರ ರೂಪವನ್ನಾಗಲಿ,
17 すなわち地の上におるもろもろの獣の像、空を飛ぶもろもろの鳥の像、
೧೭ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,
18 地に這うもろもろの物の像、地の下の水の中におるもろもろの魚の像を造ってはならない。
೧೮ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.
19 あなたはまた目を上げて天を望み、日、月、星すなわちすべて天の万象を見、誘惑されてそれを拝み、それに仕えてはならない。それらのものは、あなたの神、主が全天下の万民に分けられたものである。
೧೯ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.
20 しかし、主はあなたがたを取って、鉄の炉すなわちエジプトから導き出し、自分の所有の民とされた。きょう、見るとおりである。
೨೦ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.
21 ところで主はあなたがたのゆえに、わたしを怒り、わたしがヨルダンを渡って行くことができないことと、あなたの神、主が嗣業としてあなたに賜わる良い地にはいることができないこととを誓われた。
೨೧ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
22 わたしはこの地で死ぬ。ヨルダンを渡って行くことはできない。しかしあなたがたは渡って行って、あの良い地を獲るであろう。
೨೨ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
23 あなたがたは慎み、あなたがたの神、主があなたがたと結ばれた契約を忘れて、あなたの神、主が禁じられたどんな形の刻んだ像をも造ってはならない。
೨೩ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.
24 あなたの神、主は焼きつくす火、ねたむ神である。
೨೪ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
25 あなたがたが子を生み、孫を得、長くその地におるうちに、道を誤って、すべて何かの形に刻んだ像を造り、あなたの神、主の目の前に悪をなして、その憤りを引き起すことがあれば、
೨೫ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
26 わたしは、きょう、天と地を呼んであなたがたに対してあかしとする。あなたがたはヨルダンを渡って行って獲る地から、たちまち全滅するであろう。あなたがたはその所で長く命を保つことができず、全く滅ぼされるであろう。
೨೬ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
27 主はあなたがたを国々に散らされるであろう。そして主があなたがたを追いやられる国民のうちに、あなたがたの残る者の数は少ないであろう。
೨೭ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.
28 その所であなたがたは人が手で作った、見ることも、聞くことも、食べることも、かぐこともない木や石の神々に仕えるであろう。
೨೮ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
29 しかし、その所からあなたの神、主を求め、もし心をつくし、精神をつくして、主を求めるならば、あなたは主に会うであろう。
೨೯ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
30 後の日になって、あなたがなやみにあい、これらのすべての事が、あなたに臨むとき、もしあなたの神、主に立ち帰ってその声に聞きしたがうならば、
೩೦ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.
31 あなたの神、主はいつくしみの深い神であるから、あなたを捨てず、あなたを滅ぼさず、またあなたの先祖に誓った契約を忘れられないであろう。
೩೧ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.
32 試みにあなたの前に過ぎ去った日について問え。神が地上に人を造られた日からこのかた、天のこの端から、かの端までに、かつてこのように大いなる事があったであろうか。このようなことを聞いたことがあったであろうか。
೩೨ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.
33 火の中から語られる神の声をあなたが聞いたように、聞いてなお生きていた民がかつてあったであろうか。
೩೩ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?
34 あるいはまた、あなたがたの神、主がエジプトにおいて、あなたがたの目の前に、あなたがたのためにもろもろの事をなされたように、試みと、しるしと、不思議と、戦いと、強い手と、伸ばした腕と、大いなる恐るべき事とをもって臨み、一つの国民を他の国民のうちから引き出して、自分の民とされた神が、かつてあったであろうか。
೩೪ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
35 あなたにこの事を示したのは、主こそ神であって、ほかに神のないことを知らせるためであった。
೩೫ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.
36 あなたを訓練するために、主は天からその声を聞かせ、地上では、またその大いなる火を示された。あなたはその言葉が火の中から出るのを聞いた。
೩೬ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
37 主はあなたの先祖たちを愛されたので、その後の子孫を選び、大いなる力をもって、みずからあなたをエジプトから導き出し、
೩೭ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,
38 あなたよりも大きく、かつ強いもろもろの国民を、あなたの前から追い払い、あなたをその地に導き入れて、これを嗣業としてあなたに与えようとされること、今日見るとおりである。
೩೮ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
39 それゆえ、あなたは、きょう知って、心にとめなければならない。上は天、下は地において、主こそ神にいまし、ほかに神のないことを。
೩೯ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.
40 あなたは、きょう、わたしが命じる主の定めと命令とを守らなければならない。そうすれば、あなたとあなたの後の子孫はさいわいを得、あなたの神、主が永久にあなたに賜わる地において、長く命を保つことができるであろう」。
೪೦ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
41 それからモーセはヨルダンの向こう側、東の方に三つの町々を指定した。
೪೧ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.
42 過去の恨みによるのではなく、あやまって隣人を殺した者をそこにのがれさせ、その町の一つにのがれて、命を全うさせるためであった。
೪೨ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.
43 すなわちルベンびとのためには荒野の中の高地にあるベゼルを、ガドびとのためにはギレアデのラモテを、マナセびとのためにはバシャンのゴランを定めた。
೪೩ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.
44 モーセがイスラエルの人々の前に示した律法はこれである。
೪೪ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.
45 イスラエルの人々がエジプトから出たとき、モーセが彼らに述べたあかしと、定めと、おきてとはこれである。
೪೫ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
46 すなわちヨルダンの向こう側、アモリびとの王シホンの国のベテペオルに対する谷においてこれを述べた。シホンはヘシボンに住んでいたが、モーセとイスラエルの人々が、エジプトを出てきた時、これを撃ち敗って、
೪೬ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
47 その国を獲、またバシャンの王オグの国を獲た。このふたりはアモリびとの王であって、ヨルダンの向こう側、東の方におった。
೪೭ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.
48 彼らの獲た地はアルノン川のほとりにあるアロエルからシリオン山すなわちヘルモンに及び、
೪೮ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು
49 ヨルダンの東側のアラバの全部をかねて、アラバの海に達し、ピスガのふもとに及んだ。
೪೯ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.