< 伝道者の書 2 >
1 わたしは自分の心に言った、「さあ、快楽をもって、おまえを試みよう。おまえは愉快に過ごすがよい」と。しかし、これもまた空であった。
೧ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.
2 わたしは笑いについて言った、「これは狂気である」と。また快楽について言った、「これは何をするのか」と。
೨“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
3 わたしの心は知恵をもってわたしを導いているが、わたしは酒をもって自分の肉体を元気づけようと試みた。また、人の子は天が下でその短い一生の間、どんな事をしたら良いかを、見きわめるまでは、愚かな事をしようと試みた。
೩ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.
4 わたしは大きな事業をした。わたしは自分のために家を建て、ぶどう畑を設け、
೪ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.
5 園と庭をつくり、またすべて実のなる木をそこに植え、
೫ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.
6 池をつくって、木のおい茂る林に、そこから水を注がせた。
೬ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.
7 わたしは男女の奴隷を買った。またわたしの家で生れた奴隷を持っていた。わたしはまた、わたしより先にエルサレムにいただれよりも多くの牛や羊の財産を持っていた。
೭ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
8 わたしはまた銀と金を集め、王たちと国々の財宝を集めた。またわたしは歌うたう男、歌うたう女を得た。また人の子の楽しみとするそばめを多く得た。
೮ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
9 こうして、わたしは大いなる者となり、わたしより先にエルサレムにいたすべての者よりも、大いなる者となった。わたしの知恵もまた、わたしを離れなかった。
೯ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.
10 なんでもわたしの目の好むものは遠慮せず、わたしの心の喜ぶものは拒まなかった。わたしの心がわたしのすべての労苦によって、快楽を得たからである。そしてこれはわたしのすべての労苦によって得た報いであった。
೧೦ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.
11 そこで、わたしはわが手のなしたすべての事、およびそれをなすに要した労苦を顧みたとき、見よ、皆、空であって、風を捕えるようなものであった。日の下には益となるものはないのである。
೧೧ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
12 わたしはまた、身をめぐらして、知恵と、狂気と、愚痴とを見た。そもそも、王の後に来る人は何をなし得ようか。すでに彼がなした事にすぎないのだ。
೧೨ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.
13 光が暗きにまさるように、知恵が愚痴にまさるのを、わたしは見た。
೧೩ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
14 知者の目は、その頭にある。しかし愚者は暗やみを歩む。けれどもわたしはなお同一の運命が彼らのすべてに臨むことを知っている。
೧೪ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.
15 わたしは心に言った、「愚者に臨む事はわたしにも臨むのだ。それでどうしてわたしは賢いことがあろう」。わたしはまた心に言った、「これもまた空である」と。
೧೫ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
16 そもそも、知者も愚者も同様に長く覚えられるものではない。きたるべき日には皆忘れられてしまうのである。知者が愚者と同じように死ぬのは、どうしたことであろう。
೧೬ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
17 そこで、わたしは生きることをいとった。日の下に行われるわざは、わたしに悪しく見えたからである。皆空であって、風を捕えるようである。
೧೭ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
18 わたしは日の下で労したすべての労苦を憎んだ。わたしの後に来る人にこれを残さなければならないからである。
೧೮ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
19 そして、その人が知者であるか、または愚者であるかは、だれが知り得よう。そうであるのに、その人が、日の下でわたしが労し、かつ知恵を働かしてなしたすべての労苦をつかさどることになるのだ。これもまた空である。
೧೯ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
20 それでわたしはふり返ってみて、日の下でわたしが労したすべての労苦について、望みを失った。
೨೦ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.
21 今ここに人があって、知恵と知識と才能をもって労しても、これがために労しない人に、すべてを残して、その所有とさせなければならないのだ。これもまた空であって、大いに悪い。
೨೧ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
22 そもそも、人は日の下で労するすべての労苦と、その心づかいによってなんの得るところがあるか。
೨೨ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
23 そのすべての日はただ憂いのみであって、そのわざは苦しく、その心は夜の間も休まることがない。これもまた空である。
೨೩ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.
24 人は食い飲みし、その労苦によって得たもので心を楽しませるより良い事はない。これもまた神の手から出ることを、わたしは見た。
೨೪ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
25 だれが神を離れて、食い、かつ楽しむことのできる者があろう。
೨೫ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?
26 神は、その心にかなう人に、知恵と知識と喜びとをくださる。しかし罪びとには仕事を与えて集めることと、積むことをさせられる。これは神の心にかなう者にそれを賜わるためである。これもまた空であって、風を捕えるようである。
೨೬ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.