< エペソ人への手紙 3 >
1 こういうわけで、あなたがた異邦人のためにキリスト・イエスの囚人となっているこのパウロ
೧ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.
2 わたしがあなたがたのために神から賜わった恵みの務について、あなたがたはたしかに聞いたであろう。
೨ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,
3 すなわち、すでに簡単に書きおくったように、わたしは啓示によって奥義を知らされたのである。
೩ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
4 あなたがたはそれを読めば、キリストの奥義をわたしがどう理解しているかがわかる。
೪ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.
5 この奥義は、いまは、御霊によって彼の聖なる使徒たちと預言者たちとに啓示されているが、前の時代には、人の子らに対して、そのように知らされてはいなかったのである。
೫ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
6 それは、異邦人が、福音によりキリスト・イエスにあって、わたしたちと共に神の国をつぐ者となり、共に一つのからだとなり、共に約束にあずかる者となることである。
೬ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
7 わたしは、神の力がわたしに働いて、自分に与えられた神の恵みの賜物により、福音の僕とされたのである。
೭ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
8 すなわち、聖徒たちのうちで最も小さい者であるわたしにこの恵みが与えられたが、それは、キリストの無尽蔵の富を異邦人に宣べ伝え、
೮ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
9 更にまた、万物の造り主である神の中に世々隠されていた奥義にあずかる務がどんなものであるかを、明らかに示すためである。 (aiōn )
೯ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. (aiōn )
10 それは今、天上にあるもろもろの支配や権威が、教会をとおして、神の多種多様な知恵を知るに至るためであって、
೧೦ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. (aiōn )
11 わたしたちの主キリスト・イエスにあって実現された神の永遠の目的にそうものである。 (aiōn )
೧೧
12 この主キリストにあって、わたしたちは、彼に対する信仰によって、確信をもって大胆に神に近づくことができるのである。
೧೨ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
13 だから、あなたがたのためにわたしが受けている患難を見て、落胆しないでいてもらいたい。わたしの患難は、あなたがたの光栄なのである。
೧೩ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
೧೪ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
15 天上にあり地上にあって「父」と呼ばれているあらゆるものの源なる父に祈る。
೧೫
16 どうか父が、その栄光の富にしたがい、御霊により、力をもってあなたがたの内なる人を強くして下さるように、
೧೬ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
17 また、信仰によって、キリストがあなたがたの心のうちに住み、あなたがたが愛に根ざし愛を基として生活することにより、
೧೭ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
18 すべての聖徒と共に、その広さ、長さ、高さ、深さを理解することができ、
೧೮ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
19 また人知をはるかに越えたキリストの愛を知って、神に満ちているもののすべてをもって、あなたがたが満たされるように、と祈る。
೧೯ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
20 どうか、わたしたちのうちに働く力によって、わたしたちが求めまた思うところのいっさいを、はるかに越えてかなえて下さることができるかたに、
೨೦ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
21 教会により、また、キリスト・イエスによって、栄光が世々限りなくあるように、アァメン。 (aiōn )
೨೧ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. (aiōn )