< 出エジプト記 2 >
1 さて、レビの家のひとりの人が行ってレビの娘をめとった。
೧ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು.
2 女はみごもって、男の子を産んだが、その麗しいのを見て、三月のあいだ隠していた。
೨ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.
3 しかし、もう隠しきれなくなったので、パピルスで編んだかごを取り、それにアスファルトと樹脂とを塗って、子をその中に入れ、これをナイル川の岸の葦の中においた。
೩ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.
4 その姉は、彼がどうされるかを知ろうと、遠く離れて立っていた。
೪ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.
5 ときにパロの娘が身を洗おうと、川に降りてきた。侍女たちは川べを歩いていたが、彼女は、葦の中にかごのあるのを見て、つかえめをやり、それを取ってこさせ、
೫ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.
6 あけて見ると子供がいた。見よ、幼な子は泣いていた。彼女はかわいそうに思って言った、「これはヘブルびとの子供です」。
೬ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು.
7 そのとき幼な子の姉はパロの娘に言った、「わたしが行ってヘブルの女のうちから、あなたのために、この子に乳を飲ませるうばを呼んでまいりましょうか」。
೭ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು.
8 パロの娘が「行ってきてください」と言うと、少女は行ってその子の母を呼んできた。
೮ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.
9 パロの娘は彼女に言った、「この子を連れて行って、わたしに代り、乳を飲ませてください。わたしはその報酬をさしあげます」。女はその子を引き取って、これに乳を与えた。
೯ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.
10 その子が成長したので、彼女はこれをパロの娘のところに連れて行った。そして彼はその子となった。彼女はその名をモーセと名づけて言った、「水の中からわたしが引き出したからです」。
೧೦ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.
11 モーセが成長して後、ある日のこと、同胞の所に出て行って、そのはげしい労役を見た。彼はひとりのエジプトびとが、同胞のひとりであるヘブルびとを打つのを見たので、
೧೧ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.
12 左右を見まわし、人のいないのを見て、そのエジプトびとを打ち殺し、これを砂の中に隠した。
೧೨ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.
13 次の日また出て行って、ふたりのヘブルびとが互に争っているのを見、悪い方の男に言った、「あなたはなぜ、あなたの友を打つのですか」。
೧೩ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, “ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?” ಎಂದು ಕೇಳಿದನು.
14 彼は言った、「だれがあなたを立てて、われわれのつかさ、また裁判人としたのですか。エジプトびとを殺したように、あなたはわたしを殺そうと思うのですか」。モーセは恐れた。そしてあの事がきっと知れたのだと思った。
೧೪ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
15 パロはこの事を聞いて、モーセを殺そうとした。しかしモーセはパロの前をのがれて、ミデヤンの地に行き、井戸のかたわらに座していた。
೧೫ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.
16 さて、ミデヤンの祭司に七人の娘があった。彼女たちはきて水をくみ、水槽にみたして父の羊の群れに飲ませようとしたが、
೧೬ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.
17 羊飼たちがきて彼女らを追い払ったので、モーセは立ち上がって彼女たちを助け、その羊の群れに水を飲ませた。
೧೭ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
18 彼女たちが父リウエルのところに帰った時、父は言った、「きょうは、どうして、こんなに早く帰ってきたのか」。
೧೮ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು.
19 彼女たちは言った、「ひとりのエジプトびとが、わたしたちを羊飼たちの手から助け出し、そのうえ、水をたくさんくんで、羊の群れに飲ませてくれたのです」。
೧೯ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು.
20 彼は娘たちに言った、「そのかたはどこにおられるか。なぜ、そのかたをおいてきたのか。呼んできて、食事をさしあげなさい」。
೨೦ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
21 モーセがこの人と共におることを好んだので、彼は娘のチッポラを妻としてモーセに与えた。
೨೧ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
22 彼女が男の子を産んだので、モーセはその名をゲルショムと名づけた。「わたしは外国に寄留者となっている」と言ったからである。
೨೨ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
23 多くの日を経て、エジプトの王は死んだ。イスラエルの人々は、その苦役の務のゆえにうめき、また叫んだが、その苦役のゆえの叫びは神に届いた。
೨೩ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
24 神は彼らのうめきを聞き、神はアブラハム、イサク、ヤコブとの契約を覚え、
೨೪ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
25 神はイスラエルの人々を顧み、神は彼らをしろしめされた。
೨೫ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.