< 出エジプト記 20 >

1 神はこのすべての言葉を語って言われた。
ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
2 「わたしはあなたの神、主であって、あなたをエジプトの地、奴隷の家から導き出した者である。
“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
3 あなたはわたしのほかに、なにものをも神としてはならない。
ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.
4 あなたは自分のために、刻んだ像を造ってはならない。上は天にあるもの、下は地にあるもの、また地の下の水のなかにあるものの、どんな形をも造ってはならない。
“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
5 それにひれ伏してはならない。それに仕えてはならない。あなたの神、主であるわたしは、ねたむ神であるから、わたしを憎むものは、父の罪を子に報いて、三四代に及ぼし、
ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
6 わたしを愛し、わたしの戒めを守るものには、恵みを施して、千代に至るであろう。
ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
7 あなたは、あなたの神、主の名を、みだりに唱えてはならない。主は、み名をみだりに唱えるものを、罰しないでは置かないであろう。
ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
8 安息日を覚えて、これを聖とせよ。
“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
9 六日のあいだ働いてあなたのすべてのわざをせよ。
ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.
10 七日目はあなたの神、主の安息であるから、なんのわざをもしてはならない。あなたもあなたのむすこ、娘、しもべ、はしため、家畜、またあなたの門のうちにいる他国の人もそうである。
೧೦ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
11 主は六日のうちに、天と地と海と、その中のすべてのものを造って、七日目に休まれたからである。それで主は安息日を祝福して聖とされた。
೧೧ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
12 あなたの父と母を敬え。これは、あなたの神、主が賜わる地で、あなたが長く生きるためである。
೧೨“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
13 あなたは殺してはならない。
೧೩“ಕೊಲೆ ಮಾಡಬಾರದು.
14 あなたは姦淫してはならない。
೧೪“ವ್ಯಭಿಚಾರಮಾಡಬಾರದು.
15 あなたは盗んではならない。
೧೫“ಕದಿಯಬಾರದು.
16 あなたは隣人について、偽証してはならない。
೧೬“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
17 あなたは隣人の家をむさぼってはならない。隣人の妻、しもべ、はしため、牛、ろば、またすべて隣人のものをむさぼってはならない」。
೧೭“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
18 民は皆、かみなりと、いなずまと、ラッパの音と、山の煙っているのとを見た。民は恐れおののき、遠く離れて立った。
೧೮ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
19 彼らはモーセに言った、「あなたがわたしたちに語ってください。わたしたちは聞き従います。神がわたしたちに語られぬようにしてください。それでなければ、わたしたちは死ぬでしょう」。
೧೯ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
20 モーセは民に言った、「恐れてはならない。神はあなたがたを試みるため、またその恐れをあなたがたの目の前において、あなたがたが罪を犯さないようにするために臨まれたのである」。
೨೦ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
21 そこで、民は遠く離れて立ったが、モーセは神のおられる濃い雲に近づいて行った。
೨೧ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
22 主はモーセに言われた、「あなたはイスラエルの人々にこう言いなさい、『あなたがたは、わたしが天からあなたがたと語るのを見た。
೨೨ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
23 あなたがたはわたしと並べて、何をも造ってはならない。銀の神々も、金の神々も、あなたがたのために、造ってはならない。
೨೩ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
24 あなたはわたしのために土の祭壇を築き、その上にあなたの燔祭、酬恩祭、羊、牛をささげなければならない。わたしの名を覚えさせるすべての所で、わたしはあなたに臨んで、あなたを祝福するであろう。
೨೪ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
25 あなたがもしわたしに石の祭壇を造るならば、切り石で築いてはならない。あなたがもし、のみをそれに当てるならば、それをけがすからである。
೨೫ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
26 あなたは階段によって、わたしの祭壇に登ってはならない。あなたの隠し所が、その上にあらわれることのないようにするためである』。
೨೬ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.

< 出エジプト記 20 >