< エゼキエル書 26 >
೧ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 「人の子よ、ツロはエルサレムについて言った、『ああ、それはよい気味である。もろもろの民の門は破れて、わたしに開かれた。わたしは豊かになり、彼は破れはてた』と。
೨“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.
3 それゆえ、主なる神はこう言われる、ツロよ、わたしはあなたを攻め、海がその波を起すように、わたしは多くの国民を、あなたに攻めこさせる。
೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.
4 彼らはツロの城壁をこわし、そのやぐらを倒す。わたしはその土を払い去って、裸の岩にする。
೪ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.
5 ツロは海の中にあって、網をはる場所になる。これはわたしが言ったのであると、主なる神は言われる。ツロは、もろもろの民にかすめられ、
೫ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’
6 その本土におる娘たちは、つるぎで殺される。そして彼らは、わたしが主であることを知るようになる。
೬ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
7 主なる神はこう言われる、見よ、わたしは王の王なるバビロンの王ネブカデレザルに、馬、戦車、騎兵、および多くの軍勢をひきいて、北からツロに攻めこさせる。
೭ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.
8 彼は本土におるあなたの娘たちを、つるぎで殺し、あなたに向かって雲悌を建て、塁を築き、盾を備え、
೮ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.
9 城くずしをあなたの城壁に向け、おのであなたのやぐらを打ち砕く。
೯ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.
10 その多くの馬の土煙は、あなたをおおう。人が破れた町にはいるように、彼があなたの門にはいる時、騎兵と貨車と戦車の響きによって、あなたの石がきはゆるぐ。
೧೦ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.
11 彼はその馬のひずめで、あなたのすべてのちまたを踏みあらし、つるぎであなたの民を殺す。あなたの力強い柱は地に倒れる。
೧೧ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.
12 彼らはあなたの財宝を奪い、商品をかすめ、城壁をくずし、楽しい家をこわし、石と木と土とを水の中に投げ込む。
೧೨ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.
13 わたしはあなたの歌の声をとどめる。琴の音はもはや聞えなくなる。
೧೩ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.
14 わたしはあなたを裸の岩にする。あなたは網を張る場所となり、再び建てられることはない。主なるわたしがこれを言ったと、主なる神は言われる。
೧೪ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
15 主なる神はツロにこう言われる、海沿いの国々はあなたの倒れる響き、手負いのうめき、あなたのうちの殺人のゆえに、身震いしないであろうか。
೧೫ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
16 その時、海の君たちは皆その位からおり、朝服を脱ぎ、縫い取りの衣服を取り去り、恐れを身にまとい、地に座して、いたく恐れ、あなたの事を驚き、
೧೬ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
17 あなたのために悲しみの歌をのべて言う、『あなたは海にあって、強い誉ある町、本土に恐れを与えていたあなたも、その住民も、海から消え去った。
೧೭ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
18 島々はあなたの倒れる日に身震いする。海の島々はあなたの去り行くことを見て驚く』。
೧೮ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.”
19 主なる神はこう言われる、わたしはあなたを、荒れた町となし、住む者のない町のようにし、淵をあなたに向かってわきあがらせ、大水にあなたをおおわせる時、
೧೯ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.
20 あなたを穴に下る者どもと共に、昔の民の所に下し、穴に下る者と共に下の国に、昔のままの荒れ跡の中に、あなたを住ませる。それゆえ、あなたは人の住む所とならず、また生ある者の地に所を得ない。
೨೦“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.
21 わたしはあなたの終りを、恐るべきものとする。あなたは無に帰する。あなたを尋ねる人があっても、永久に見いださないと、主なる神は言われる」。
೨೧ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.