< エゼキエル書 28 >
೧ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
2 「人の子よ、ツロの君に言え、主なる神はこう言われる、あなたは心に高ぶって言う、『わたしは神である、神々の座にすわって、海の中にいる』と。しかし、あなたは自分を神のように賢いと思っても、人であって、神ではない。
೨“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
3 見よ、あなたはダニエルよりも賢く、すべての秘密もあなたには隠れていない。
೩“ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?
4 あなたは知恵と悟りとによって富を得、金銀を倉にたくわえた。
೪ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.
5 あなたは大いなる貿易の知恵によってあなたの富を増し、その富によってあなたの心は高ぶった。
೫ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”
6 それゆえ、主なる神はこう言われる、あなたは自分を神のように賢いと思っているゆえ、
೬ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.
7 見よ、わたしは、もろもろの国民の最も恐れている異邦人をあなたに攻めこさせる。彼らはつるぎを抜いて、あなたが知恵をもって得た麗しいものに向かい、あなたの輝きを汚し、
೭ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
8 あなたを穴に投げ入れる。あなたは海の中で殺された者のような死を遂げる。
೮“ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.
9 それでもなおあなたは、『自分は神である』と、あなたを殺す人々の前で言うことができるか。あなたは自分を傷つける者の手にかかっては、人であって、神ではないではないか。
೯ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.
10 あなたは異邦人の手によって割礼を受けない者の死を遂げる。これはわたしが言うのであると、主なる神は言われる」。
೧೦ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.
೧೧ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
12 「人の子よ、ツロの王のために悲しみの歌をのべて、これに言え。主なる神はこう言われる、あなたは知恵に満ち、美のきわみである完全な印である。
೧೨“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.
13 あなたは神の園エデンにあって、もろもろの宝石が、あなたをおおっていた。すなわち赤めのう、黄玉、青玉、貴かんらん石、緑柱石、縞めのう、サファイヤ、ざくろ石、エメラルド。そしてあなたの象眼も彫刻も金でなされた。これらはあなたの造られた日に、あなたのために備えられた。
೧೩ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
14 わたしはあなたを油そそがれた守護のケルブと一緒に置いた。あなたは神の聖なる山にいて、火の石の間を歩いた。
೧೪“‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.
15 あなたは造られた日から、あなたの中に悪が見いだされた日まではそのおこないが完全であった。
೧೫ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
16 あなたの商売が盛んになると、あなたの中に暴虐が満ちて、あなたは罪を犯した。それゆえ、わたしはあなたを神の山から汚れたものとして投げ出し、守護のケルブはあなたを火の石の間から追い出した。
೧೬“‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
17 あなたは自分の美しさのために心高ぶり、その輝きのために自分の知恵を汚したゆえに、わたしはあなたを地に投げうち、王たちの前に置いて見せ物とした。
೧೭“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.
18 あなたは不正な交易をして犯した多くの罪によってあなたの聖所を汚したゆえ、わたしはあなたの中から火を出してあなたを焼き、あなたを見るすべての者の前であなたを地の上の灰とした。
೧೮ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.
19 もろもろの民のうちであなたを知る者は皆あなたについて驚く。あなたは恐るべき終りを遂げ、永遠にうせはてる」。
೧೯ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”
೨೦ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
21 「人の子よ、あなたの顔をシドンに向け、これに向かって預言して、
೨೧“ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
22 言え。主なる神はこう言われる、シドンよ、見よ、わたしはあなたの敵となる、わたしはあなたのうちで栄えをあらわす。わたしがシドンのうちにさばきをおこない、そのうちにわたしの聖なることをあらわす時、彼らはわたしが主であることを知る。
೨೨ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.
23 わたしは疫病をこれに送り、そのちまたに流血を送る。その四方からこれに臨むつるぎによって殺される者がその中に倒れる時、彼らはわたしが主であることを知る。
೨೩‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.
24 イスラエルの家には、もはや刺すいばらはなく、これを卑しめたその周囲の人々のうちには、苦しめるとげもなくなる。こうして彼らはわたしが主であることを知るようになる。
೨೪“ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.
25 主なる神はこう言われる、わたしがイスラエルの家の者を、その散らされたもろもろの民の中から集め、もろもろの国民の目の前で、彼らにわたしの聖なることをあらわす時、彼らはわたしが、わがしもべヤコブに与えた地に住むようになる。
೨೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.
26 彼らはそこに安らかに住み、家を建て、またぶどう畑を作る。かつて彼らを卑しめたすべての隣り人たちに対して、わたしがさばきを行う時、彼らは安らかに住む。こうして彼らは、わたしが彼らの神、主であることを知る」。
೨೬ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’”