< エゼキエル書 35 >

1 主の言葉がわたしに臨んだ、
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 「人の子よ、あなたの顔をセイル山に向け、これに対して預言し、
“ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,
3 これに言え。主なる神はこう言われる、セイル山よ、見よ、わたしはあなたを敵とし、わたしの手をあなたに向かって伸べ、あなたを全く荒し、
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.
4 あなたの町々を滅ぼす。あなたは荒れはてる。そしてわたしが主であることを悟る。
ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.
5 あなたは限りない敵意をいだいて、イスラエルの人々をその災の時、終りの刑罰の時に、つるぎの手に渡した。
“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
6 それゆえ、主なる神は言われる、わたしは生きている。わたしはあなたを血にわたす。血はあなたを追いかける。あなたには血のとががあるゆえ、血はあなたを追いかける
ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.
7 わたしはセイル山を全く荒し、そこに行き来する者を断ち、
“ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.
8 その山々を殺された者で満たす。つるぎで殺された者が、あなたのもろもろの丘、もろもろの谷、もろもろのくぼ地に倒れる。
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.
9 わたしはあなたを、永遠の荒れ地とし、あなたの町々には住む者がなくなる。そしてあなたがたは、わたしが主であることを悟る。
ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”
10 あなたは言う、『これら二つの国民、二つの国はわたしのもの、われわれはこれを獲よう』と。しかし主はそこにおられる。
೧೦ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
11 それゆえ、主なる神は言われる、わたしは生きている。あなたが彼らを憎んで、彼らに示した怒りと、ねたみにしたがって、わたしはあなたを扱う。わたしがあなたをさばく時、わたし自身をあなたに示す。
೧೧“ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
12 あなたがイスラエルの山々に向かって、『これは荒れはてて、われわれの食となる』と言ったもろもろのそしりを、主なるわたしが聞いたことをあなたは悟る。
೧೨ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
13 あなたがたは、わたしに対して口をもって誇り、またわたしに対して、あなたがたの言葉を多くした。わたしはそれを聞いた。
೧೩ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
14 主なる神はこう言われる、全地の喜びのために、わたしはあなたを荒れ地とする。
೧೪ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.
15 あなたが、イスラエルの家の嗣業の荒れるのを喜んだように、わたしはあなたに、そのようにする。セイル山よ、あなたは荒れ地となる。エドムもすべてそのようになる。そのとき彼らは、わたしが主であることを悟るようになる。
೧೫ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”

< エゼキエル書 35 >