< エズラ記 5 >
1 さて預言者ハガイおよびイドの子ゼカリヤのふたりの預言者は、ユダとエルサレムにいるユダヤ人に向かって、彼らの上にいますイスラエルの神の名によって預言した。
೧ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.
2 そこでシャルテルの子ゼルバベルおよびヨザダクの子エシュアは立ちあがって、エルサレムにある神の宮を建て始めた。神の預言者たちも、彼らと共にいて彼らを助けた。
೨ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
3 その時、川向こうの州の知事タテナイおよびセタル・ボズナイとその同僚は彼らの所に来てこう言った、「だれがあなたがたにこの宮を建て、この城壁を築きあげることを命じたのか」。
೩ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.
4 また「この建物を建てている人々の名はなんというのか」と尋ねた。
೪ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.
5 しかしユダヤ人の長老たちの上には、神の目が注がれていたので、彼らはこれをやめさせることができず、その事をダリヨスに奏して、その返答の来るのを待った。
೫ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.
6 川向こうの州の知事タテナイおよびセタル・ボズナイとその同僚である川向こうの州の知事たちが、ダリヨス王に送った手紙の写しは次のとおりである。
೬ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.
7 すなわち、彼らが王に送った手紙には、次のようにしるされてあった。「願わくはダリヨス王に全き平安があるように。
೭ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.
8 王に次のことをお知らせいたします。すなわち、われわれがユダヤ州へ行き、かの大いなる神の宮へ行って見たところ、それは大きな石をもって建てられ、材木を組んで壁をつくり、その工事は勤勉に行われ、彼らの手によって大いにはかどっています。
೮ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.
9 そこでわれわれはその長老たちに尋ねてこう言いました、『だれがあなたがたにこの宮を建て、この城壁を築きあげることを命じたのか』と。
೯“ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.
10 われわれはまた彼らのかしらたる人々の名を書きしるして、あなたにお知らせするために、その名を尋ねました。
೧೦ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.
11 すると、彼らはわれわれに答えてこう言いました、『われわれは天地の神のしもべであって、年久しい昔に建てられた宮を、再び建てるのです。これはもと、イスラエルの大いなる王の建てあげたものですが、
೧೧ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.
12 われわれの先祖たちが、天の神の怒りを引き起したため、神は彼らを、カルデヤびとバビロンの王ネブカデネザルの手に渡されたので、彼はこの宮をこわし、民をバビロンに捕えて行きました。
೧೨ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
13 ところがバビロンの王クロスの元年に、クロス王は神のこの宮を再び建てることの命令を下されました。
೧೩ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.
14 またクロス王は先にネブカデネザルが、エルサレムの宮からバビロンの神殿に移した神の宮の金銀の器を、バビロンの神殿から取り出して、彼が総督に任じたセシバザルという名の者に渡して、
೧೪ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.
15 彼に言われました、「これらの器を携えて行って、エルサレムにある宮に納め、神の宮をもとの所に建てよ」と。
೧೫ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.
16 そこでこのセシバザルは来てエルサレムにある神の宮の基礎をすえました。その時から今に至るまで、建築を続けていますが、まだ完成しないのです』と。
೧೬ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.
17 それで今、もし王がよしと見られるならば、バビロンにある王の宝庫を調べて、エルサレムの神のこの宮を建てることの命令が、はたしてクロス王から出ているかどうかを確かめ、この事についての王のお考えをわれわれに伝えてください」。
೧೭“ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು.