< 創世記 10 >
1 ノアの子セム、ハム、ヤペテの系図は次のとおりである。洪水の後、彼らに子が生れた。
೧ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.
2 ヤペテの子孫はゴメル、マゴグ、マダイ、ヤワン、トバル、メセク、テラスであった。
೨ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.
೩ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.
4 ヤワンの子孫はエリシャ、タルシシ、キッテム、ドダニムであった。
೪ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
5 これらから海沿いの地の国民が分れて、おのおのその土地におり、その言語にしたがい、その氏族にしたがって、その国々に住んだ。
೫ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
6 ハムの子孫はクシ、ミツライム、プテ、カナンであった。
೬ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.
7 クシの子孫はセバ、ハビラ、サブタ、ラアマ、サブテカであり、ラアマの子孫はシバとデダンであった。
೭ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.
8 クシの子はニムロデであって、このニムロデは世の権力者となった最初の人である。
೮ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.
9 彼は主の前に力ある狩猟者であった。これから「主の前に力ある狩猟者ニムロデのごとし」ということわざが起った。
೯ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
10 彼の国は最初シナルの地にあるバベル、エレク、アカデ、カルネであった。
೧೦ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
11 彼はその地からアッスリヤに出て、ニネベ、レホボテイリ、カラ、
೧೧ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,
12 およびニネベとカラとの間にある大いなる町レセンを建てた。
೧೨ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.
13 ミツライムからルデ族、アナミ族、レハビ族、ナフト族、
೧೩ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.
14 パテロス族、カスル族、カフトリ族が出た。カフトリ族からペリシテ族が出た。
೧೪ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.
15 カナンからその長子シドンが出て、またヘテが出た。
೧೫ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
16 その他エブスびと、アモリびと、ギルガシびと、
೧೬ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
೧೭ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು.
18 アルワデびと、ゼマリびと、ハマテびとが出た。後になってカナンびとの氏族がひろがった。
೧೮ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.
19 カナンびとの境はシドンからゲラルを経てガザに至り、ソドム、ゴモラ、アデマ、ゼボイムを経て、レシャに及んだ。
೧೯ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.
20 これらはハムの子孫であって、その氏族とその言語とにしたがって、その土地と、その国々にいた。
೨೦ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.
21 セムにも子が生れた。セムはエベルのすべての子孫の先祖であって、ヤペテの兄であった。
೨೧ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.
22 セムの子孫はエラム、アシュル、アルパクサデ、ルデ、アラムであった。
೨೨ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.
23 アラムの子孫はウヅ、ホル、ゲテル、マシであった。
೨೩ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.
24 アルパクサデの子はシラ、シラの子はエベルである。
೨೪ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು.
25 エベルにふたりの子が生れた。そのひとりの名をペレグといった。これは彼の代に地の民が分れたからである。その弟の名をヨクタンといった。
೨೫ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
26 ヨクタンにアルモダデ、シャレフ、ハザルマウテ、エラ、
೨೬ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ,
೨೭ಹದೋರಾಮ್, ಊಜಾಲ್, ದಿಕ್ಲಾ,
೨೮ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.
29 オフル、ハビラ、ヨバブが生れた。これらは皆ヨクタンの子であった。
೨೯ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.
30 彼らが住んだ所はメシャから東の山地セパルに及んだ。
೩೦ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.
31 これらはセムの子孫であって、その氏族とその言語とにしたがって、その土地と、その国々にいた。
೩೧ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.
32 これらはノアの子らの氏族であって、血統にしたがって国々に住んでいたが、洪水の後、これらから地上の諸国民が分れたのである。
೩೨ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.