< 創世記 18 >
1 主はマムレのテレビンの木のかたわらでアブラハムに現れられた。それは昼の暑いころで、彼は天幕の入口にすわっていたが、
೧ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
2 目を上げて見ると、三人の人が彼に向かって立っていた。彼はこれを見て、天幕の入口から走って行って彼らを迎え、地に身をかがめて、
೨ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
3 言った、「わが主よ、もしわたしがあなたの前に恵みを得ているなら、どうぞしもべを通り過ごさないでください。
೩“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
4 水をすこし取ってこさせますから、あなたがたは足を洗って、この木の下でお休みください。
೪ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
5 わたしは一口のパンを取ってきます。元気をつけて、それからお出かけください。せっかくしもべの所においでになったのですから」。彼らは言った、「お言葉どおりにしてください」。
೫ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
6 そこでアブラハムは急いで天幕に入り、サラの所に行って言った、「急いで細かい麦粉三セヤをとり、こねてパンを造りなさい」。
೬ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
7 アブラハムは牛の群れに走って行き、柔らかな良い子牛を取って若者に渡したので、急いで調理した。
೭ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
8 そしてアブラハムは凝乳と牛乳および子牛の調理したものを取って、彼らの前に供え、木の下で彼らのかたわらに立って給仕し、彼らは食事した。
೮ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
9 彼らはアブラハムに言った、「あなたの妻サラはどこにおられますか」。彼は言った、「天幕の中です」。
೯ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
10 そのひとりが言った、「来年の春、わたしはかならずあなたの所に帰ってきましょう。その時、あなたの妻サラには男の子が生れているでしょう」。サラはうしろの方の天幕の入口で聞いていた。
೧೦ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
11 さてアブラハムとサラとは年がすすみ、老人となり、サラは女の月のものが、すでに止まっていた。
೧೧ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
12 それでサラは心の中で笑って言った、「わたしは衰え、主人もまた老人であるのに、わたしに楽しみなどありえようか」。
೧೨ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
13 主はアブラハムに言われた、「なぜサラは、わたしは老人であるのに、どうして子を産むことができようかと言って笑ったのか。
೧೩ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
14 主にとって不可能なことがありましょうか。来年の春、定めの時に、わたしはあなたの所に帰ってきます。そのときサラには男の子が生れているでしょう」。
೧೪ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
15 サラは恐れたので、これを打ち消して言った、「わたしは笑いません」。主は言われた、「いや、あなたは笑いました」。
೧೫ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
16 その人々はそこを立ってソドムの方に向かったので、アブラハムは彼らを見送って共に行った。
೧೬ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
17 時に主は言われた、「わたしのしようとする事をアブラハムに隠してよいであろうか。
೧೭ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
18 アブラハムは必ず大きな強い国民となって、地のすべての民がみな、彼によって祝福を受けるのではないか。
೧೮ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
19 わたしは彼が後の子らと家族とに命じて主の道を守らせ、正義と公道とを行わせるために彼を知ったのである。これは主がかつてアブラハムについて言った事を彼の上に臨ませるためである」。
೧೯ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
20 主はまた言われた、「ソドムとゴモラの叫びは大きく、またその罪は非常に重いので、
೨೦ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
21 わたしはいま下って、わたしに届いた叫びのとおりに、すべて彼らがおこなっているかどうかを見て、それを知ろう」。
೨೧ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.
22 その人々はそこから身を巡らしてソドムの方に行ったが、アブラハムはなお、主の前に立っていた。
೨೨ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
23 アブラハムは近寄って言った、「まことにあなたは正しい者を、悪い者と一緒に滅ぼされるのですか。
೨೩ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
24 たとい、あの町に五十人の正しい者があっても、あなたはなお、その所を滅ぼし、その中にいる五十人の正しい者のためにこれをゆるされないのですか。
೨೪ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
25 正しい者と悪い者とを一緒に殺すようなことを、あなたは決してなさらないでしょう。正しい者と悪い者とを同じようにすることも、あなたは決してなさらないでしょう。全地をさばく者は公義を行うべきではありませんか」。
೨೫ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
26 主は言われた、「もしソドムで町の中に五十人の正しい者があったら、その人々のためにその所をすべてゆるそう」。
೨೬ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
27 アブラハムは答えて言った、「わたしはちり灰に過ぎませんが、あえてわが主に申します。
೨೭ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
28 もし五十人の正しい者のうち五人欠けたなら、その五人欠けたために町を全く滅ぼされますか」。主は言われた、「もしそこに四十五人いたら、滅ぼさないであろう」。
೨೮ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
29 アブラハムはまた重ねて主に言った、「もしそこに四十人いたら」。主は言われた、「その四十人のために、これをしないであろう」。
೨೯ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
30 アブラハムは言った、「わが主よ、どうかお怒りにならぬよう。わたしは申します。もしそこに三十人いたら」。主は言われた、「そこに三十人いたら、これをしないであろう」。
೩೦ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
31 アブラハムは言った、「いまわたしはあえてわが主に申します。もしそこに二十人いたら」。主は言われた、「わたしはその二十人のために滅ぼさないであろう」。
೩೧ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
32 アブラハムは言った、「わが主よ、どうかお怒りにならぬよう。わたしはいま一度申します、もしそこに十人いたら」。主は言われた、「わたしはその十人のために滅ぼさないであろう」。
೩೨ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
33 主はアブラハムと語り終り、去って行かれた。アブラハムは自分の所に帰った。
೩೩ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.