< 創世記 45 >
1 そこでヨセフはそばに立っているすべての人の前で、自分を制しきれなくなったので、「人は皆ここから出てください」と呼ばわった。それゆえヨセフが兄弟たちに自分のことを明かした時、ひとりも彼のそばに立っている者はなかった。
೧ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
2 ヨセフは声をあげて泣いた。エジプトびとはこれを聞き、パロの家もこれを聞いた。
೨ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.
3 ヨセフは兄弟たちに言った、「わたしはヨセフです。父はまだ生きながらえていますか」。兄弟たちは答えることができなかった。彼らは驚き恐れたからである。
೩ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
4 ヨセフは兄弟たちに言った、「わたしに近寄ってください」。彼らが近寄ったので彼は言った、「わたしはあなたがたの弟ヨセフです。あなたがたがエジプトに売った者です。
೪ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
5 しかしわたしをここに売ったのを嘆くことも、悔むこともいりません。神は命を救うために、あなたがたよりさきにわたしをつかわされたのです。
೫ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
6 この二年の間、国中にききんがあったが、なお五年の間は耕すことも刈り入れることもないでしょう。
೬ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
7 神は、あなたがたのすえを地に残すため、また大いなる救をもってあなたがたの命を助けるために、わたしをあなたがたよりさきにつかわされたのです。
೭ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.
8 それゆえわたしをここにつかわしたのはあなたがたではなく、神です。神はわたしをパロの父とし、その全家の主とし、またエジプト全国のつかさとされました。
೮“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
9 あなたがたは父のもとに急ぎ上って言いなさい、『あなたの子ヨセフが、こう言いました。神がわたしをエジプト全国の主とされたから、ためらわずにわたしの所へ下ってきなさい。
೯ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
10 あなたはゴセンの地に住み、あなたも、あなたの子らも、孫たちも、羊も牛も、その他のものもみな、わたしの近くにおらせます。
೧೦ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
11 ききんはなお五年つづきますから、あなたも、家族も、その他のものも、みな困らないように、わたしはそこで養いましょう』。
೧೧ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
12 あなたがたと弟ベニヤミンが目に見るとおり、あなたがたに口ら語っているのはこのわたしです。
೧೨“ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
13 あなたがたはエジプトでの、わたしのいっさいの栄えと、あなたがたが見るいっさいの事をわたしの父に告げ、急いでわたしの父をここへ連れ下りなさい」。
೧೩ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,
14 そしてヨセフは弟ベニヤミンのくびを抱いて泣き、ベニヤミンも彼のくびを抱いて泣いた。
೧೪ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
15 またヨセフはすべての兄弟たちに口づけし、彼らを抱いて泣いた。そして後、兄弟たちは彼と語った。
೧೫ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
16 時に、「ヨセフの兄弟たちがきた」と言ううわさがパロの家に聞えたので、パロとその家来たちとは喜んだ。
೧೬ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
17 パロはヨセフに言った、「兄弟たちに言いなさい、『あなたがたは、こうしなさい。獣に荷を負わせてカナンの地へ行き、
೧೭ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
18 父と家族とを連れてわたしのもとへきなさい。わたしはあなたがたに、エジプトの地の良い物を与えます。あなたがたは、この国の最も良いものを食べるでしょう』。
೧೮ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
19 また彼らに命じなさい、『あなたがたは、こうしなさい。幼な子たちと妻たちのためにエジプトの地から車をもって行き、父を連れてきなさい。
೧೯ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
20 家財に心を引かれてはなりません。エジプト全国の良い物は、あなたがたのものだからです』」。
೨೦ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
21 イスラエルの子らはそのようにした。ヨセフはパロの命に従って彼らに車を与え、また途中の食料をも与えた。
೨೧ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
22 まためいめいに晴着を与えたが、ベニヤミンには銀三百シケルと晴着五着とを与えた。
೨೨ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
23 また彼は父に次のようなものを贈った。すなわちエジプトの良い物を負わせたろば十頭と、穀物、パン及び父の道中の食料を負わせた雌ろば十頭。
೨೩ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
24 こうしてヨセフは兄弟たちを送り去らせ、彼らに言った、「途中で争ってはなりません」。
೨೪ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
25 彼らはエジプトから上ってカナンの地に入り、父ヤコブのもとへ行って、
೨೫ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
26 彼に言った、「ヨセフはなお生きていてエジプト全国のつかさです」。ヤコブは気が遠くなった。彼らの言うことが信じられなかったからである。
೨೬ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
27 そこで彼らはヨセフが語った言葉を残らず彼に告げた。父ヤコブはヨセフが自分を乗せるために送った車を見て元気づいた。
೨೭ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
28 そしてイスラエルは言った、「満足だ。わが子ヨセフがまだ生きている。わたしは死ぬ前に行って彼を見よう」。
೨೮ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.