< 創世記 48 >
1 これらの事の後に、「あなたの父は、いま病気です」とヨセフに告げる者があったので、彼はふたりの子、マナセとエフライムとを連れて行った。
೧ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.
2 時に人がヤコブに告げて、「あなたの子ヨセフがあなたのもとにきました」と言ったので、イスラエルは努めて床の上にすわった。
೨“ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.
3 そしてヤコブはヨセフに言った、「先に全能の神がカナンの地ルズでわたしに現れ、わたしを祝福して、
೩ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.
4 言われた、『わたしはおまえに多くの子を得させ、おまえをふやし、おまえを多くの国民としよう。また、この地をおまえの後の子孫に与えて永久の所有とさせる』。
೪ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
5 エジプトにいるあなたの所にわたしが来る前に、エジプトの国で生れたあなたのふたりの子はいまわたしの子とします。すなわちエフライムとマナセとはルベンとシメオンと同じようにわたしの子とします。
೫ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.
6 ただし彼らの後にあなたに生れた子らはあなたのものとなります。しかし、その嗣業はその兄弟の名で呼ばれるでしょう。
೬ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.
7 わたしがパダンから帰って来る途中ラケルはカナンの地で死に、わたしは悲しんだ。そこはエフラタに行くまでには、なお隔たりがあった。わたしはエフラタ、すなわちベツレヘムへ行く道のかたわらに彼女を葬った」。
೭ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.
8 ところで、イスラエルはヨセフの子らを見て言った、「これはだれですか」。
೮ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, “ಇವರು ಯಾರು?” ಎಂದು ಕೇಳಲು,
9 ヨセフは父に言った、「神がここでわたしにくださった子どもです」。父は言った、「彼らをわたしの所に連れてきて、わたしに祝福させてください」。
೯ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.
10 イスラエルの目は老齢のゆえに、かすんで見えなかったが、ヨセフが彼らを父の所に近寄らせたので、父は彼らに口づけし、彼らを抱いた。
೧೦ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
11 そしてイスラエルはヨセフに言った、「あなたの顔が見られようとは思わなかったのに、神はあなたの子らをもわたしに見させてくださった」。
೧೧ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.
12 そこでヨセフは彼らをヤコブのひざの間から取り出し、地に伏して拝した。
೧೨ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.
13 ヨセフはエフライムを右の手に取ってイスラエルの左の手に向かわせ、マナセを左の手に取ってイスラエルの右の手に向かわせ、ふたりを近寄らせた。
೧೩ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.
14 すると、イスラエルは右の手を伸べて弟エフライムの頭に置き、左の手をマナセの頭に置いた。マナセは長子であるが、ことさらそのように手を置いたのである。
೧೪ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.
15 そしてヨセフを祝福して言った、「わが先祖アブラハムとイサクの仕えた神、生れてからきょうまでわたしを養われた神、
೧೫ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,
16 すべての災からわたしをあがなわれたみ使よ、この子供たちを祝福してください。またわが名と先祖アブラハムとイサクの名とが、彼らによって唱えられますように、また彼らが地の上にふえひろがりますように」。
೧೬ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
17 ヨセフは父が右の手をエフライムの頭に置いているのを見て不満に思い、父の手を取ってエフライムの頭からマナセの頭へ移そうとした。
೧೭ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,
18 そしてヨセフは父に言った、「父よ、そうではありません。こちらが長子です。その頭に右の手を置いてください」。
೧೮ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.
19 父は拒んで言った、「わかっている。子よ、わたしにはわかっている。彼もまた一つの民となり、また大いなる者となるであろう。しかし弟は彼よりも大いなる者となり、その子孫は多くの国民となるであろう」。
೧೯ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.
20 こうして彼はこの日、彼らを祝福して言った、「あなたを指して、イスラエルは、人を祝福して言うであろう、『神があなたをエフライムのごとく、またマナセのごとくにせられるように』」。このように、彼はエフライムをマナセの先に立てた。
೨೦ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
21 イスラエルはまたヨセフに言った、「わたしはやがて死にます。しかし、神はあなたがたと共におられて、あなたがたを先祖の国に導き返されるであろう。
೨೧ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.
22 なおわたしは一つの分を兄弟よりも多くあなたに与える。これはわたしがつるぎと弓とを持ってアモリびとの手から取ったものである」。
೨೨ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.