< ホセア書 6 >
1 「さあ、わたしたちは主に帰ろう。主はわたしたちをかき裂かれたが、またいやし、わたしたちを打たれたが、また包んでくださるからだ。
೧ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
2 主は、ふつかの後、わたしたちを生かし、三日目にわたしたちを立たせられる。わたしたちはみ前で生きる。
೨ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
3 わたしたちは主を知ろう、せつに主を知ることを求めよう。主はあしたの光のように必ず現れいで、冬の雨のように、わたしたちに臨み、春の雨のように地を潤される」。
೩ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.
4 エフライムよ、わたしはあなたに何をしようか。ユダよ、わたしはあなたに何をしようか。あなたがたの愛はあしたの雲のごとく、また、たちまち消える露のようなものである。
೪ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
5 それゆえ、わたしは預言者たちによって彼らを切り倒し、わが口の言葉をもって彼らを殺した。わがさばきは現れ出る光のようだ。
೫ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.
6 わたしはいつくしみを喜び、犠牲を喜ばない。燔祭よりもむしろ神を知ることを喜ぶ。
೬ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.
7 ところが彼らはアダムで契約を破り、かしこでわたしにそむいた。
೭ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
8 ギレアデは悪を行う者の町で、血の足跡で満たされている。
೮ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಜಾಡುಗಳು ರಕ್ತಮಯವೇ.
9 盗賊が人を待ち伏せするように、祭司たちは党を組み、シケムへ行く道で人を殺す。このように彼らは悪しき事を行う。
೯ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.
10 わたしはイスラエルの家に恐るべき事を見た。かしこでエフライムは淫行をなし、イスラエルは汚された。
೧೦ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.
11 ユダよ、あなたのためにも刈入れが定められている。わたしがわが民の繁栄を回復するとき、
೧೧ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.