< ホセア書 1 >
1 ユダヤの王ウジヤ、ヨタム、アハズ、ヒゼキヤの世、イスラエルの王ヨアシの子ヤラベアムの世に、ベエリの子ホセアに臨んだ主の言葉。
೧ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.
2 主が最初ホセアによって語られた時、主はホセアに言われた、「行って、淫行の妻と、淫行によって生れた子らを受けいれよ。この国は主にそむいて、はなはだしい淫行をなしているからである」。
೨ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.
3 そこで彼は行ってデブライムの娘ゴメルをめとった。彼女はみごもって男の子を産んだ。
೩ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು.
4 主はまた彼に言われた、「あなたはその子の名をエズレルと名づけよ。しばらくしてわたしはエズレルの血のためにエヒウの家を罰し、イスラエルの家の国を滅ぼすからである。
೪ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.
5 その日、わたしはエズレルの谷でイスラエルの弓を折る」と。
೫ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು” ಎಂದನು.
6 ゴメルはまたみごもって女の子を産んだ。主はホセアに言われた、「あなたはその名をロルハマと名づけよ。わたしはもはやイスラエルの家をあわれまず、決してこれをゆるさないからである。
೬ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.
7 しかし、わたしはユダの家をあわれみ、その神、主によってこれを救う。わたしは弓、つるぎ、戦争、馬および騎兵によって救うのではない」と。
೭ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.
8 ゴメルはロルハマを乳離れさせたとき、またみごもって男の子を産んだ。
೮ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು.
9 主は言われた、「その子の名をロアンミと名づけよ。あなたがたは、わたしの民ではなく、わたしは、あなたがたの神ではないからである」。
೯ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.
10 しかしイスラエルの人々の数は海の砂のように量ることも、数えることもできないほどになって、さきに彼らが「あなたがたは、わたしの民ではない」と言われたその所で、「あなたがたは生ける神の子である」と言われるようになる。
೧೦ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
11 そしてユダの人々とイスラエルの人々は共に集まり、ひとりの長を立てて、その地からのぼって来る。エズレルの日は大いなるものとなる。
೧೧ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.