< イザヤ書 13 >
1 アモツの子イザヤに示されたバビロンについての託宣。
೧ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
2 あなたがたは木のない山に旗を立て、声をあげて彼らを招き、手を振って彼らを貴族の門に、はいらせよ。
೨ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.
3 わたしはわが怒りのさばきを行うために聖別した者どもに命じ、わが勇士、わが勝ち誇る者どもを招いた。
೩ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.
4 聞け、多くの民のような騒ぎ声が山々に聞える。聞け、もろもろの国々、寄りつどえるもろもろの国民のざわめく声が聞える。これは万軍の主が戦いのために軍勢を集められるのだ。
೪ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
5 彼らは遠い国から、天の果から来る。これは、主とその憤りの器で、全地を滅ぼすために来るのだ。
೫ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
6 あなたがたは泣き叫べ。主の日が近づき、滅びが全能者から来るからだ。
೬ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
7 それゆえ、すべての手は弱り、すべての人の心は溶け去る。
೭ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.
8 彼らは恐れおののき、苦しみと悩みに捕えられ、子を産まんとする女のようにもだえ苦しみ、互に驚き、顔を見あわせ、その顔は炎のようになる。
೮ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
9 見よ、主の日が来る。残忍で、憤りと激しい怒りとをもってこの地を荒し、その中から罪びとを断ち滅ぼすために来る。
೯ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
10 天の星とその星座とはその光を放たず、太陽は出ても暗く、月はその光を輝かさない。
೧೦ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.
11 わたしはその悪のために世を罰し、その不義のために悪い者を罰し、高ぶる者の誇をとどめ、あらぶる者の高慢を低くする。
೧೧ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
12 わたしは人を精金よりも、オフルのこがねよりも少なくする。
೧೨ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.
13 それゆえ、万軍の主の憤りにより、その激しい怒りの日に、天は震い、地は揺り動いて、その所をはなれる。
೧೩ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
14 彼らは追われた、かもしかのように、あるいは集める者のない羊のようになって、おのおの自分の民に帰り、自分の国に逃げて行く。
೧೪ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
15 すべて見いだされる者は刺され、すべて捕えられる者はつるぎによって倒され、
೧೫ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.
16 彼らのみどりごはその目の前で投げ砕かれ、その家はかすめ奪われ、その妻は汚される。
೧೬ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.
17 見よ、わたしは、しろがねをも顧みず、こがねをも喜ばないメデアびとを起して、彼らにむかわせる。
೧೭ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
18 彼らの弓は若い者を射殺し、腹の実をあわれむことなく、幼な子を見て、惜しむことがない。
೧೮ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.
19 国々の誉であり、カルデヤびとの誇である麗しいバビロンは、神に滅ぼされたソドム、ゴモラのようになる。
೧೯ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
20 ここにはながく住む者が絶え、世々にいたるまで住みつく者がなく、アラビヤびともそこに天幕を張らず、羊飼もそこに群れを伏させることがない。
೨೦ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
21 ただ、野の獣がそこに伏し、ほえる獣がその家に満ち、だちょうがそこに住み、鬼神がそこに踊る。
೨೧ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು. ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.
22 ハイエナはその城の中で鳴き、山犬は楽しい宮殿でほえる。その時の来るのは近い、その日は延びることがない。
೨೨ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.