< イザヤ書 47 >
1 処女なるバビロンの娘よ、下って、ちりの中にすわれ。カルデヤびとの娘よ、王座のない地にすわれ。あなたはもはや、やさしく、たおやかな女ととなえられることはない。
೧ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
2 石うすをとって粉をひけ、顔おおいを取り去り、うちぎを脱ぎ、すねをあらわして川を渡れ。
೨ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.
3 あなたの裸はあらわれ、あなたの恥は見られる。わたしはあだを報いて、何人とをも助けない。
೩ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
4 われわれをあがなう者はその名を万軍の主といい、イスラエルの聖者である。
೪ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
5 カルデヤびとの娘よ、黙してすわれ、また暗い所にはいれ。あなたはもはや、もろもろの国の女王ととなえられることはない。
೫ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
6 わたしはわが民を憤り、わが嗣業を汚して、これをあなたの手に渡した。あなたはこれに、あわれみを施さず、年老いた者の上に、はなはだ重いくびきを負わせた。
೬ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
7 あなたは言った、「わたしは、とこしえに女王となる」と。そして、あなたはこれらの事を心にとめず、またその終りを思わなかった。
೭“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
8 楽しみにふけり、安らかにおり、心のうちに「ただわたしだけで、わたしのほかにだれもなく、わたしは寡婦となることはない、また子を失うことはない」と言う者よ、今この事を聞け。
೮“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
9 これらの二つの事は一日のうちに、またたくまにあなたに臨む。すなわち子を失い、寡婦となる事はたといあなたが多くの魔術を行い、魔法の大いなる力をもってしてもことごとくあなたに臨む。
೯ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
10 あなたは自分の悪に寄り頼んで言う、「わたしを見る者はない」と。あなたの知恵と、あなたの知識とはあなたを惑わした。あなたは心のうちに言った、「ただわたしだけで、わたしのほかにだれもない」と。
೧೦ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
11 しかし、わざわいが、あなたに臨む、あなたは、それをあがなうことができない。なやみが、あなたを襲う、あなたは、それをつぐなうことができない。滅びが、にわかにあなたに臨む、あなたは、それについて何も知らない。
೧೧ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.
12 あなたが若い時から勤め行ったあなたの魔法と、多くの魔術とをもって立ちむかってみよ、あるいは成功するかもしれない、あるいは敵を恐れさせるかもしれない。
೧೨ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
13 あなたは多くの計りごとによってうみ疲れた。かの天を分かつ者、星を見る者、新月によって、あなたに臨む事を告げる者を立ちあがらせて、あなたを救わせてみよ。
೧೩ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
14 見よ、彼らはわらのようになって、火に焼き滅ぼされ、自分の身を炎の勢いから、救い出すことができない。その火は身を暖める炭火ではない、またその前にすわるべき火でもない。
೧೪ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
15 あなたが勤めて行ったものと、あなたの若い時からあなたと売り買いした者とは、ついにこのようになる。彼らはめいめい自分の方向にさすらいゆき、ひとりもあなたを救う者はない。
೧೫ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.