< イザヤ書 51 >
1 「義を追い求め、主を尋ね求める者よ、わたしに聞け。あなたがたの切り出された岩と、あなたがたの掘り出された穴とを思いみよ。
೧ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
2 あなたがたの父アブラハムと、あなたがたを産んだサラとを思いみよ。わたしは彼をただひとりであったときに召し、彼を祝福して、その子孫を増し加えた。
೨ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
3 主はシオンを慰め、またそのすべて荒れた所を慰めて、その荒野をエデンのように、そのさばくを主の園のようにされる。こうして、その中に喜びと楽しみとがあり、感謝と歌の声とがある。
೩ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
4 わが民よ、わたしに聞け、わが国びとよ、わたしに耳を傾けよ。律法はわたしから出、わが道はもろもろの民の光となる。
೪“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
5 わが義はすみやかに近づき、わが救は出て行った。わが腕はもろもろの民を治める。海沿いの国々はわたしを待ち望み、わが腕に寄り頼む。
೫ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
6 目をあげて天を見、また下なる地を見よ。天は煙のように消え、地は衣のようにふるび、その中に住む者は、ぶよのように死ぬ。しかし、わが救はとこしえにながらえ、わが義はくじけることがない。
೬ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
7 義を知る者よ、心のうちにわが律法をたもつ者よ、わたしに聞け。人のそしりを恐れてはならない、彼らのののしりに驚いてはならない。
೭ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
8 彼らは衣のように、しみに食われ、羊の毛のように虫に食われるからだ。しかし、わが義はとこしえにながらえ、わが救はよろず代に及ぶ」。
೮ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”
9 主のかいなよ、さめよ、さめよ、力を着よ。さめて、いにしえの日、昔の代にあったようになれ。ラハブを切り殺し、龍を刺し貫いたのは、あなたではなかったか。
೯ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
10 海をかわかし、大いなる淵の水をかわかし、また海の深き所を、あがなわれた者の過ぎる道とされたのは、あなたではなかったか。
೧೦ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
11 主にあがなわれた者は、歌うたいつつ、シオンに帰ってきて、そのこうべに、とこしえの喜びをいただき、彼らは喜びと楽しみとを得、悲しみと嘆きとは逃げ去る。
೧೧ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
12 「わたしこそあなたを慰める者だ。あなたは何者なれば、死ぬべき人を恐れ、草のようになるべき人の子を恐れるのか。
೧೨ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
13 天をのべ、地の基をすえられたあなたの造り主、主を忘れて、なぜ、しえたげる者が滅ぼそうと備えをするとき、その憤りのゆえに常にひねもす恐れるのか。しえたげる者の憤りはどこにあるか。
೧೩ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?
14 身をかがめている捕われ人は、すみやかに解かれて、死ぬことなく、穴にくだることなく、その食物はつきることがない。
೧೪ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.
15 わたしは海をふるわせ、その波をなりどよめかすあなたの神、主である。その名を万軍の主という。
೧೫ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ, ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.
16 わたしはわが言葉をあなたの口におき、わが手の陰にあなたを隠した。こうして、わたしは天をのべ、地の基をすえ、シオンにむかって、あなたはわが民であると言う」。
೧೬ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
17 エルサレムよ、起きよ、起きよ、立て。あなたはさきに主の手から憤りの杯をうけて飲み、よろめかす大杯を、滓までも飲みほした。
೧೭ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
18 その産んだもろもろの子のなかに、自分を導く者なく、その育てたもろもろの子のなかに、自分の手をとる者がない。
೧೮ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
19 これら二つの事があなたに臨んだだれがあなたと共に嘆くだろうか荒廃と滅亡、ききんとつるぎ。だれがあなたを慰めるだろうか。
೧೯ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?
20 あなたの子らは息絶えだえになり、網にかかった、かもしかのように、すべてのちまたのすみに横たわり、主の憤りと、あなたの神の責めとは、彼らに満ちている。
೨೦ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.
21 それゆえ、苦しめる者、酒にではなく酔っている者よ、これを聞け。
೨೧ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.
22 あなたの主、おのが民の訴えを弁護されるあなたの神、主はこう言われる、「見よ、わたしはよろめかす杯をあなたの手から取り除き、わが憤りの大杯を取り除いた。あなたは再びこれを飲むことはない。
೨೨ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
23 わたしはこれをあなたを悩ます者の手におく。彼らはさきにあなたにむかって言った、『身をかがめよ、われわれは越えていこう』と。そしてあなたはその背を地のようにし、ちまたのようにして、彼らの越えていくにまかせた」。
೨೩ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”