< イザヤ書 60 >
1 起きよ、光を放て。あなたの光が臨み、主の栄光があなたの上にのぼったから。
೧ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
2 見よ、暗きは地をおおい、やみはもろもろの民をおおう。しかし、あなたの上には主が朝日のごとくのぼられ、主の栄光があなたの上にあらわれる。
೨ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
3 もろもろの国は、あなたの光に来、もろもろの王は、のぼるあなたの輝きに来る。
೩ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
4 あなたの目をあげて見まわせ、彼らはみな集まってあなたに来る。あなたの子らは遠くから来、あなたの娘らは、かいなにいだかれて来る。
೪ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
5 その時あなたは見て、喜びに輝き、あなたの心はどよめき、かつ喜ぶ。海の富が移ってあなたに来、もろもろの国の宝が、あなたに来るからである。
೫ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
6 多くのらくだ、ミデアンおよびエパの若きらくだはあなたをおおい、シバの人々はみな黄金、乳香を携えてきて、主の誉を宣べ伝える。
೬ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
7 ケダルの羊の群れはみなあなたに集まって来、ネバヨテの雄羊はあなたに仕え、わが祭壇の上にのぼって受けいれられる。こうして、わたしはわが栄光の家を輝かす。
೭ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
8 雲のように飛び、はとがその小屋に飛び帰るようにして来る者はだれか。
೮ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?
9 海沿いの国々はわたしを待ち望み、タルシシの船はいや先にあなたの子らを遠くから載せて来、また彼らの金銀を共に載せて来て、あなたの神、主の名にささげ、イスラエルの聖者にささげる。主があなたを輝かされたからである。
೯ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
10 異邦人はあなたの城壁を築き、彼らの王たちはあなたに仕える。わたしは怒りをもってあなたを打ったけれども、また恵みをもってあなたをあわれんだからである。
೧೦ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
11 あなたの門は常に開いて、昼も夜も閉ざすことはない。これは人々が国々の宝をあなたに携えて来、その王たちを率いて来るためである。
೧೧ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
12 あなたに仕えない国と民とは滅び、その国々は全く荒れすたれる。
೧೨ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
13 レバノンの栄えはあなたに来、いとすぎ、すずかけ、まつは皆共に来て、わが聖所をかざる。またわたしはわが足をおく所を尊くする。
೧೩ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
14 あなたを苦しめた者の子らは、かがんで、あなたのもとに来、あなたをさげすんだ者は、ことごとくあなたの足もとに伏し、あなたを主の都、イスラエルの聖者のシオンととなえる。
೧೪ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
15 あなたは捨てられ、憎まれて、その中を過ぎる者もなかったが、わたしはあなたを、とこしえの誇、世々の喜びとする。
೧೫ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
16 あなたはまた、もろもろの国の乳を吸い、王たちの乳ぶさを吸い、そして主なるわたしが、あなたの救主、また、あなたのあがない主、ヤコブの全能者であることを知るにいたる。
೧೬ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
17 わたしは青銅の代りに黄金を携え、くろがねの代りにしろがねを携え、木の代りに青銅を、石の代りに鉄を携えてきて、あなたのまつりごとを平和にし、あなたのつかさびとを正しくする。
೧೭ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
18 暴虐は、もはやあなたの地に聞かれず、荒廃と滅亡は、もはやあなたの境のうちに聞かれず、あなたはその城壁を「救」ととなえ、その門を「誉」ととなえる。
೧೮ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
19 昼は、もはや太陽があなたの光とならず、夜も月が輝いてあなたを照さず、主はとこしえにあなたの光となり、あなたの神はあなたの栄えとなられる。
೧೯ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
20 あなたの太陽は再び没せず、あなたの月はかけることがない。主がとこしえにあなたの光となり、あなたの悲しみの日が終るからである。
೨೦ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
21 あなたの民はことごとく正しい者となって、とこしえに地を所有する。彼らはわたしの植えた若枝、わが手のわざ、わが栄光をあらわすものとなる。
೨೧ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
22 その最も小さい者は氏族となり、その最も弱い者は強い国となる。わたしは主である。その時がくるならば、すみやかにこの事をなす。
೨೨ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.