< エレミヤ書 11 >

1 主からエレミヤに臨んだ言葉は言う、
ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
2 「この契約の言葉を聞き、ユダの人々とエルサレムに住む者に告げよ。
“ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,
3 彼らに言え、イスラエルの神、主はこう仰せられる、この契約の言葉に従わない人は、のろわれる。
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.
4 この契約は、わたしがあなたがたの先祖をエジプトの地、鉄のかまどの中から導き出した時に、彼らに命じたところのものである。すなわち、その時わたしは彼らに言った、わたしの声を聞き、あなたがたに命じるすべてのことを行うならば、あなたがたはわたしの民となり、わたしはあなたがたの神となる。
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
5 そして、わたしがあなたがたの先祖に、乳と蜜との流れる地を与えると誓ったことを、なし遂げると。すなわち今日のとおりである」。その時わたしは、「主よ、仰せのとおりです」と答えた。
ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
6 主はわたしに言われた、「このすべての言葉を、ユダの町々と、エルサレムのちまたに告げ示し、この契約の言葉を聞き、これを行え、と言いなさい。
ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.
7 わたしは、あなたがたの先祖をエジプトの地から導き出した時から今日にいたるまで、おごそかに彼らを戒め、絶えず戒めて、わたしの声に聞き従うようにと言った。
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
8 しかし彼らは従わず、その耳を傾けず、おのおの自分の悪い強情な心に従って歩んだ。それゆえ、わたしはこの契約の言葉をもって彼らを責めた。これはわたしが彼らに行えと命じたが、行わなかったものである」。
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.
9 主はまたわたしに言われた、「ユダの人々とエルサレムに住む者のうちに反逆の事がある。
ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
10 彼らは、わたしの言葉を聞くことを拒んだその先祖たちの罪に立ち返り、またほかの神々に従ってそれに仕えた。イスラエルの家とユダの家とは、わたしがその先祖たちと結んだ契約を破った。
೧೦ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
11 それゆえ主はこう言われる、見よ、わたしは災を彼らの上に下す。彼らはそれを免れることはできない。彼らがわたしを呼んでも、わたしは聞かない。
೧೧ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
12 ユダの町々とエルサレムに住む者は、行って、自分たちがそれに香をたいている神々に呼び求めるが、これらは、彼らの災の時にも決して彼らを救うことはできない。
೧೨ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
13 ユダよ、あなたの神々は、あなたの町の数ほど多くなった。またあなたがたはエルサレムのちまたの数ほどの祭壇を恥ずべき者のために立てた。すなわちバアルに香をたくための祭壇である。
೧೩ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.
14 それゆえ、この民のために祈ってはならない。また彼らのために泣き、あるいは祈り求めてはならない。彼らがその災の時に、わたしに呼ばわっても、わたしは彼らに聞くことをしないからだ。
೧೪ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
15 わが愛する者は、わたしの家で何をするのか。すでにこれは悪事を行った。誓願と犠牲の肉とがあなたに災を免れさせることができるであろうか。それであなたは喜ぶことができるであろうか。
೧೫ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
16 主はあなたを、かつては『良い実のなる美しい青々としたオリブの木』と呼ばれたが、激しい暴風のとどろきと共に、主はそれに火をかけ、その枝を焼き払われるのである。
೧೬ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
17 あなたを植えた万軍の主は、あなたに向かって災を言い渡された。これはイスラエルの家とユダの家とが悪を行い、バアルに香をたいて、わたしを怒らせたからである」。
೧೭ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.
18 主が知らせてくださったので、わたしはそれを知った。その時、あなたは彼らの悪しきわざをわたしに示された。
೧೮ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.
19 しかしわたしは、ほふられに行く、おとなしい小羊のようで、彼らがわたしを害しようと、計りごとをめぐらしているのを知らなかった。彼らは言う、「さあ、木とその実を共に滅ぼそう。生ける者の地から彼を絶って、その名を人に忘れさせよう」。
೧೯ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
20 正しいさばきをし、人の心と思いを探られる万軍の主よ、わたしは自分の訴えをあなたにお任せしました。あなたが彼らにあだをかえされるのを見させてください。
೨೦ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
21 それゆえ主はアナトテの人々についてこう言われる、彼らはあなたの命を取ろうと求めて言う、「主の名によって預言してはならない。それをするならば、あなたはわれわれの手にかかって死ぬであろう」。
೨೧ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
22 それで万軍の主はこう言われる、「見よ、わたしは彼らを罰する。若い人はつるぎで死に、彼らのむすこ娘は、ききんで死に、
೨೨ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
23 だれも残る者はない。わたしがアナトテの人々に災を下し、彼らを罰する年をこさせるからである」。
೨೩ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.

< エレミヤ書 11 >