< エレミヤ書 14 >

1 ひでりの事についてエレミヤに臨んだ主の言葉。
ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
2 「ユダは悲しみ、その町々の門は傾き、民は地に座して嘆き、エルサレムの叫びはあがる。
ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
3 その君たちは、しもべをつかわして水をくませる。彼らが井戸の所にきても、水は見つからず、むなしい器をもって帰り、恥じ、かつ当惑して、その頭をおおう。
ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
4 地に雨が降らず、土が、かわいて割れたため、農夫は恥じて、その頭をおおう。
ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
5 野にいる雌じかでさえも子を産んで、これを捨てる。草がないからである。
ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
6 野ろばは、はげ山の上に立って、山犬のようにあえぎ、草のないために、その目はくらむ。
ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
7 主よ、われわれの罪がわれわれを訴えて不利な証言をしても、あなたの名のために、事をなしてください。われわれの背信の数は多く、あなたに向かって罪を犯しました。
ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
8 イスラエルの望みなる主よ、悩みの時の救主よ、なぜ、あなたはこの地に住む異邦の人のようにし、また一夜の宿りのために立ち寄る旅びとのようになさらねばならないのですか。
ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
9 なぜ、あなたは、うろたえている人のようにし、また人を救いえない勇士のようになさらねばならないのですか。主よ、あなたはわれわれのうちにいらせられます。われわれは、み名によって呼ばれている者です。われわれを見捨てないでください」。
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
10 この民について主はこう言われる、「彼らはこのように好んで、さまよい、その足をとどめることをしなかったので、主は彼らを喜ばず、いまそのとがを覚え、その罪を罰するのだ」。
೧೦ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
11 主はわたしに言われた、「この民のために恵みを祈ってはならない。
೧೧ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
12 彼らが断食しても、わたしは彼らの呼ぶのを聞かない。燔祭と素祭をささげても、わたしはそれを受けない。かえって、つるぎと、ききん、および疫病をもって、彼らを滅ぼしてしまう」。
೧೨ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
13 わたしは言った、「ああ、主なる神よ、預言者たちはこの民に向かい、『あなたがたは、つるぎを見ることはない。ききんもこない。わたしはこの所に確かな平安をあなたがたに与える』と言っています」。
೧೩ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
14 主はわたしに言われた、「預言者らはわたしの名によって偽りの預言をしている。わたしは彼らをつかわさなかった。また彼らに命じたこともなく、話したこともない。彼らは偽りの黙示と、役に立たない占い、および自分の心でつくりあげた欺きをあなたがたに預言しているのだ。
೧೪ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
15 それゆえ、わたしがつかわさないのに、わたしの名によって預言して、『つるぎとききんは、この地にこない』と言っているあの預言者について、主はこう仰せられる、この預言者らは、つるぎとききんに滅ぼされる。
೧೫ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
16 また彼らの預言を聞く民は、ききんとつるぎとによって、エルサレムのちまたに投げ捨てられる。だれもこれを葬る者はない。彼らとその妻、およびそのむすこ娘も同様である。わたしが彼らの悪をその上に注ぐからである。
೧೬ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
17 この言葉を彼らに語れ、『わたしの目は夜も昼も絶えず涙を流す。わが民の娘であるおとめが大きな傷と重い打撃によって滅ぼされるからである。
೧೭ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
18 わたしが出て畑に行くと、つるぎで殺された者がある。町にはいると、ききんで病んでいる者がある。預言者も祭司も共にその地にさまよって、知るところがない』」。
೧೮ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
19 あなたはまったくユダを捨てられたのですか。あなたの心はシオンをきらわれるのですか。あなたはわれわれを撃ったのに、どうしていやしてはくださらないのですか。われわれは平安を望んだが、良い事はこなかった。いやされる時を望んだが、かえって恐怖が来た。
೧೯ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
20 主よ、われわれは自分の悪と、先祖のとがとを認めています。われわれはあなたに罪を犯しました。
೨೦ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
21 み名のために、われわれを捨てないでください。あなたの栄えあるみ位をはずかしめないでください。あなたがわれわれにお立てになった契約を覚えて、それを破らないでください。
೨೧ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
22 異邦の偽りの神々のうちに、雨を降らせうる者があるであろうか。天が自分で夕立ちを降らすことができようか。われわれの神、主よ、あなたこそ、これをなさる方ではありませんか。われわれの待ち望むのはあなたです。あなたがこれらすべてのことをなさるからです。
೨೨ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

< エレミヤ書 14 >