< エレミヤ書 27 >

1 ユダの王ヨシヤの子ゼデキヤが世を治め始めたころ、この言葉が主からエレミヤに臨んだ。
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
2 すなわち主はこうわたしに仰せられた、「綱と、くびきとを作って、それをあなたの首につけ、
“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,
3 エルサレムにいるユダの王ゼデキヤの所に来た使者たちによって、エドムの王、モアブの王、アンモンびとの王、ツロの王、シドンの王に言いおくりなさい。
ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
4 彼らの主君にこの命を伝えさせなさい、『万軍の主、イスラエルの神はこう仰せられる、あなたがたは主君にこのように告げなければならない。
ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
5 わたしは大いなる力と伸べた腕とをもって、地と地の上にいる人と獣とをつくった者である。そして心のままに地を人に与える。
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
6 いまわたしはこのすべての国を、わたしのしもべであるバビロンの王ネブカデネザルの手に与え、また野の獣をも彼に与えて彼に仕えさせた。
ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
7 彼の地に時がくるまで、万国民は彼とその子とその孫に仕える。その時がくるならば、多くの国と大いなる王たちとが彼を自分の奴隷にする。
ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
8 バビロンの王ネブカデネザルに仕えず、バビロンの王のくびきを自分の首に負わない民と国とは、わたしがつるぎと、ききんと、疫病をもって罰し、ついには彼の手によってことごとく滅ぼすと主は言われる。
ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.
9 それで、あなたがたの預言者、占い師、夢みる者、法術師、魔法使が、「あなたがたはバビロンの王に仕えることはない」と言っても、聞いてはならない。
‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
10 彼らはあなたがたに偽りを預言して、あなたがたを自分の国から遠く離れさせ、わたしに、あなたがたを追い出してあなたがたを滅ぼさせるのである。
೧೦ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
11 しかしバビロンの王のくびきを首に負って、彼に仕える国民を、わたしはその故国に残らせ、それを耕して、そこに住まわせると主は言われる』」。
೧೧ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
12 わたしはユダの王ゼデキヤにも同じように言った、「あなたがたは、バビロンの王のくびきを自分の首に負って、彼とその民とに仕え、そして生きなさい。
೧೨ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
13 どうしてあなたと、あなたの民とが、主がバビロンの王に仕えない国民について言われたように、つるぎと、ききんと、疫病に死んでよかろうか。
೧೩ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
14 あなたがたはバビロンの王に仕えることはないとあなたがたに告げる預言者の言葉を聞いてはならない。彼らがあなたがたに預言していることは偽りであるからだ。
೧೪‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
15 主は言われる、わたしが彼らをつかわしたのではないのに、彼らはわたしの名によって偽って預言している。そのために、わたしはあなたがたを追い払い、あなたがたと、あなたがたに預言する預言者たちを滅ぼすようになるのだ」。
೧೫ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”
16 わたしはまた祭司とこのすべての民とに語って言った、「主はこう仰せられる、『見よ、主の宮の器は今、すみやかに、バビロンから返されてくる』とあなたがたに預言する預言者の言葉を聞いてはならない。それは、彼らがあなたがたに預言していることは偽りであるからだ。
೧೬ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
17 彼らのいうことを聞いてはならない。バビロンの王に仕え、そして生きなさい。どうしてこの町が荒れ地となってよかろうか。
೧೭ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.
18 もし彼らが預言者であって、主の言葉が彼らのうちにあるのであれば、主の宮とユダの王の宮殿とエルサレムとに残されている器が、バビロンに移されないように、万軍の主に、とりなしを願うべきだ。
೧೮ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
19 万軍の主は柱と海と台、その他この町に残っている器について、こう仰せられる。
೧೯ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.
20 これはバビロンの王ネブカデネザルが、ユダの王エホヤキムの子エコニヤ、およびユダとエルサレムのすべての身分の尊い人々を捕えてエルサレムからバビロンに移したときに、持ち去らなかった器である。
೨೦ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
21 すなわち万軍の主、イスラエルの神は、主の宮とユダの王の宮殿とエルサレムとに残されている器について、こう仰せられる。
೨೧ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
22 これらはバビロンに携え行かれ、わたしが顧みる日までそこにおかれている。その後、わたしはこれらのものを、この所に携え帰らせると主は言われる」。
೨೨‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’”

< エレミヤ書 27 >