< エレミヤ書 6 >
1 ベニヤミンの人々よ、エルサレムの中から避難せよ。テコアでラッパを吹き、ベテハケレムに合図の火をあげよ。北から災が臨み、大いなる滅びが来るからである。
೧“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
2 わたしは美しい、たおやかなシオンの娘を滅ぼす。
೨ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.
3 牧者たちは、その群れをひきいて来て、彼女を攻め、彼女の周囲に天幕を張る。群れはおのおのその所で草を食う。
೩ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
4 「戦いを始め、彼女を攻めよ。立て、われわれは真昼に攻撃しよう」。「わざわいなるかな、日ははや傾き、夕日の影は長くなった」。
೪ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
5 「立て、われわれは夜の間に攻撃しよう、そして彼女のもろもろの宮殿を破壊しよう」。
೫ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.
6 万軍の主はこう言われる、「あなたがたは彼女の木を切り倒し、エルサレムにむかって塁を築け。これは罰すべき町である、そのうちにはただ圧制だけがある。
೬ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
7 井戸に新しい水がわくように彼女はその悪を常にあらたに流す。そのうちには暴虐と破滅とが聞える。わたしの前に病と傷とが絶えない。
೭ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
8 エルサレムよ、戒めを受けいれよ。さもないと、わたしはあなたから離れ、あなたを荒れ地とし、住む人のない地とする」。
೮ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
9 万軍の主はこう言われる、「ぶどうの残りを摘みとるように、イスラエルの残りの民をのこらず摘み取れ。ぶどうを摘みとる人のように、あなたの手をふたたびその枝に伸ばせ」。
೯ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
10 わたしはだれに語り、だれを戒めて、聞かせようか。見よ、彼らの耳は閉ざされて、聞くことができない。見よ、彼らは主の言葉をあざけり、それを喜ばない。
೧೦ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
11 それゆえ、わたしの身には主の怒りが満ち、それを忍ぶのに、うみつかれている。「それをちまたにいる子供らと、集まっている若い人々とに漏らせ。夫も妻も、老いた人も、年のひじょうに進んだ人も捕えられ、
೧೧ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
12 彼らの家と畑と妻とは共に他人に渡る。わたしが手を伸ばして、この地に住む者を撃つからである」と主は言われる。
೧೨ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
13 「それは彼らが、小さい者から大きい者まで、みな不正な利をむさぼり、また預言者から祭司にいたるまで、みな偽りを行っているからだ。
೧೩ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
14 彼らは、手軽にわたしの民の傷をいやし、平安がないのに『平安、平安』と言っている。
೧೪ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
15 彼らは憎むべきことをして、恥じたであろうか。すこしも恥ずかしいとは思わず、また恥じることを知らなかった。それゆえ彼らは倒れる者と共に倒れる。わたしが彼らを罰するとき、彼らは倒れる」と主は言われる。
೧೫ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
16 主はこう言われる、「あなたがたはわかれ道に立って、よく見、いにしえの道につき、良い道がどれかを尋ねて、その道に歩み、そしてあなたがたの魂のために、安息を得よ。しかし彼らは答えて、『われわれはその道に歩まない』と言った。
೧೬ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
17 わたしはあなたがたの上に見張びとを立て、『ラッパの音に気をつけよ』と言った。しかし彼らは答えて、『われわれは気をつけることはしない』と言った。
೧೭‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.
18 それゆえ国々の民よ、聞け。会衆よ、彼らにどのようなことが起るかを知れ。
೧೮ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!
19 地よ、聞け。見よ、わたしはこの民に災をくだす。それは彼らのたくらみの実である。彼らがわたしの言葉に気をつけず、わたしのおきてを捨てたからである。
೧೯ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
20 シバから、わたしの所に乳香が来、遠い国から、菖蒲が来るのはなんのためか。あなたがたの燔祭はわたしには喜ばしくなく、あなたがたの犠牲もうれしくはない。
೨೦ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
21 それゆえ主はこう言われる、『見よ、わたしはこの民の前につまずく石を置く、人々は父も子も共にそれにつまずき、隣り人もその友も滅びる』」。
೨೧ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.
22 主はこう言われる、「見よ、民が北の国から来る、大いなる国民が地の果から興る。
೨೨“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
23 彼らは弓とやりをとる。彼らは残忍で、あわれみがなく、海のような響きを立てる。シオンの娘よ、彼らは馬に乗り、いくさ人のように身をよろって、あなたを攻める」。
೨೩ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
24 われわれはそのうわさを聞いて、手は弱り、子を産む女に臨むような悩みと苦しみとに捕えられた。
೨೪ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
25 畑に出てはならない、また道を歩いてはならない。敵はつるぎを持ち、恐れが四方にあるからだ。
೨೫ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.
26 わが民の娘よ、荒布を身にまとい、灰の中にまろび、ひとり子を失った時のように、悲しみ、いたく嘆け。滅ぼす者が、にわかにわれわれを襲うからだ。
೨೬ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
27 「わたしはあなたを民のうちに立てて、ためす者、試みる者とした。あなたが彼らの道を知り、それをためすことができるようにするためである。
೨೭ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
28 彼らはみな、強情な反逆者であって、歩きまわって人をそしる。彼らは青銅や鉄であって、みな卑しいことを行う。
೨೮ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
29 ふいごは激しく吹き、鉛は火にとけて尽き、精錬はいたずらに進む。悪しき者がまだ除かれないからである。
೨೯ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
30 主が彼らを捨てられたので、彼らは捨てられた銀と呼ばれる」。
೩೦ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.