< ヨブ 記 14 >

1 女から生れる人は日が短く、悩みに満ちている。
“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.
2 彼は花のように咲き出て枯れ、影のように飛び去って、とどまらない。
ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.
3 あなたはこのような者にさえ目を開き、あなたの前に引き出して、さばかれるであろうか。
ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?
4 だれが汚れたもののうちから清いものを出すことができようか、ひとりもない。
ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.
5 その日は定められ、その月の数もあなたと共にあり、あなたがその限りを定めて、越えることのできないようにされたのだから、
ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.
6 彼から目をはなし、手をひいてください。そうすれば彼は雇人のように、その日を楽しむことができるでしょう。
ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.
7 木には望みがある。たとい切られてもまた芽をだし、その若枝は絶えることがない。
ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ!
8 たといその根が地の中に老い、その幹が土の中に枯れても、
ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ,
9 なお水の潤いにあえば芽をふき、若木のように枝を出す。
ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ ಗಿಡದ ಹಾಗೆ ಕವಲೊಡೆಯುವುದು.
10 しかし人は死ねば消えうせる。息が絶えれば、どこにおるか。
೧೦ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.
11 水が湖から消え、川がかれて、かわくように、
೧೧ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ,
12 人は伏して寝、また起きず、天のつきるまで、目ざめず、その眠りからさまされない。
೧೨ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.
13 どうぞ、わたしを陰府にかくし、あなたの怒りのやむまで、潜ませ、わたしのために時を定めて、わたしを覚えてください。 (Sheol h7585)
೧೩ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! (Sheol h7585)
14 人がもし死ねば、また生きるでしょうか。わたしはわが服役の諸日の間、わが解放の来るまで待つでしょう。
೧೪ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.
15 あなたがお呼びになるとき、わたしは答えるでしょう。あなたはみ手のわざを顧みられるでしょう。
೧೫ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು.
16 その時あなたはわたしの歩みを数え、わたしの罪を見のがされるでしょう。
೧೬ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!
17 わたしのとがは袋の中に封じられ、あなたはわたしの罪を塗りかくされるでしょう。
೧೭ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.
18 しかし山は倒れてくずれ、岩もその所から移される。
೧೮ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,
19 水は石をうがち、大水は地のちりを洗い去る。このようにあなたは人の望みを断たれる。
೧೯ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.
20 あなたはながく彼に勝って、彼を去り行かせ、彼の顔かたちを変らせて追いやられる。
೨೦ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.
21 彼の子らは尊くなっても、彼はそれを知らない、卑しくなっても、それを悟らない。
೨೧ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.
22 ただおのが身に痛みを覚え、おのれのために嘆くのみである」。
೨೨ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”

< ヨブ 記 14 >