< ヨシュア記 14 >
1 イスラエルの人々が、カナンの地で受けた嗣業の地は、次のとおりである。すなわち、祭司エレアザル、ヌンの子ヨシュア、およびイスラエルの人々の部族の首長たちが、これを彼らに分かち、
೧ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
2 主がモーセによって命じられたように、くじによって、これを九つの部族と、半ばの部族とに、嗣業として与えた。
೨ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
3 これはヨルダンの向こう側で、モーセがすでに他の二つの部族と、半ばの部族とに、嗣業を与えていたからである。ただしレビびとには、彼らの中で嗣業を与えず、
೩ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
4 ヨセフの子孫が、マナセと、エフライムの二つの部族となったからである。レビびとには土地の分け前を与えず、ただ、その住むべき町々および、家畜と持ち物とを置くための放牧地を与えたばかりであった。
೪ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
5 イスラエルの人々は、主がモーセに命じられたようにおこなって、その地を分けた。
೫ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.
6 時に、ユダの人々がギルガルのヨシュアの所にきて、ケニズびとエフンネの子カレブが、ヨシュアに言った、「主がカデシ・バルネアで、あなたとわたしとについて、神の人モーセに言われたことを、あなたはごぞんじです。
೬ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
7 主のしもべモーセが、この地を探るために、わたしをカデシ・バルネアからつかわした時、わたしは四十歳でした。そしてわたしは、自分の信ずるところを復命しました。
೭ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
8 しかし、共に上って行った兄弟たちは、民の心をくじいてしまいましたが、わたしは全くわが神、主に従いました。
೮ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
9 その日モーセは誓って、言いました、『おまえの足で踏んだ地は、かならず長くおまえと子孫との嗣業となるであろう。おまえが全くわが神、主に従ったからである』。
೯ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
10 主がこの言葉をモーセに語られた時からこのかた、イスラエルが荒野に歩んだ四十五年の間、主は言われたように、わたしを生きながらえさせてくださいました。わたしは今日すでに八十五歳ですが、
೧೦ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
11 今もなお、モーセがわたしをつかわした日のように、健やかです。わたしの今の力は、あの時の力に劣らず、どんな働きにも、戦いにも堪えることができます。
೧೧ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
12 それで主があの日語られたこの山地を、どうか今、わたしにください。あの日あなたも聞いたように、そこにはアナキびとがいて、その町々は大きく堅固です。しかし、主がわたしと共におられて、わたしはついには、主が言われたように、彼らを追い払うことができるでしょう」。
೧೨ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
13 そこでヨシュアはエフンネの子カレブを祝福し、ヘブロンを彼に与えて嗣業とさせた。
೧೩ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
14 こうしてヘブロンは、ケニズびとエフンネの子カレブの嗣業となって、今日に至っている。彼が全くイスラエルの神、主に従ったからである。
೧೪ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
15 ヘブロンの名は、もとはキリアテ・アルバといった。アルバは、アナキびとのうちの、最も大いなる人であった。こうしてこの地に戦争はやんだ。
೧೫ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.