< ヨシュア記 5 >
1 ヨルダンの向こう側、すなわち西の方におるアモリびとの王たちと、海べにおるカナンびとの王たちとは皆、主がイスラエルの人々の前で、ヨルダンの水を干しからして、彼らを渡らせられたと聞いて、イスラエルの人々のゆえに、心は消え、彼らのうちに、もはや元気もなくなった。
೧ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.
2 その時、主はヨシュアに言われた、「火打石の小刀を造り、重ねてまたイスラエルの人々に割礼を行いなさい」。
೨ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು
3 そこでヨシュアは火打石の小刀を造り、陽皮の丘で、イスラエルの人々に割礼を行った。
೩ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.
4 ヨシュアが人々に割礼を行った理由はこうである。エジプトから出てきた民のうちの、すべての男子、すなわち、いくさびとたちは皆、エジプトを出た後、途中、荒野で死んだが、
೪ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.
5 その出てきた民は皆、割礼を受けた者であった。しかし、エジプトを出た後に、途中、荒野で生まれた民は、みな割礼を受けていなかった。
೫ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.
6 イスラエルの人々は四十年の間、荒野を歩いていて、そのエジプトから出てきた民、すなわち、いくさびとたちは、みな死に絶えた。これは彼らが主の声に聞き従わなかったので、主は彼らの先祖たちに誓って、われわれに与えると仰せられた地、乳と蜜の流れる地を、彼らに見させないと誓われたからである。
೬ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
7 ヨシュアが割礼を行ったのは、この人々についで起されたその子どもたちであった。彼らは途中で割礼を受けていなかったので、無割礼の者であったからである。
೭ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.
8 すべての民に割礼を行うことが終ったので、民は宿営のうちの自分の所にとどまって傷の直るのを待った。
೮ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.
9 その時、主はヨシュアに言われた、「きょう、わたしはエジプトのはずかしめを、あなたがたからころがし去った」。それでその所の名は、今日までギルガルと呼ばれている。
೯ಯೆಹೋವನು ಯೆಹೋಶುವನಿಗೆ, “ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.
10 イスラエルの人々はギルガルに宿営していたが、その月の十四日の夕暮、エリコの平野で過越の祭を行った。
೧೦ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.
11 そして過越の祭の翌日、その地の穀物、すなわち種入れぬパンおよびいり麦を、その日に食べたが、
೧೧ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.
12 その地の穀物を食べた翌日から、マナの降ることはやみ、イスラエルの人々は、もはやマナを獲なかった。その年はカナンの地の産物を食べた。
೧೨ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.
13 ヨシュアがエリコの近くにいたとき、目を上げて見ると、ひとりの人が抜き身のつるぎを手に持ち、こちらに向かって立っていたので、ヨシュアはその人のところへ行って言った、「あなたはわれわれを助けるのですか。それともわれわれの敵を助けるのですか」。
೧೩ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು
14 彼は言った、「いや、わたしは主の軍勢の将として今きたのだ」。ヨシュアは地にひれ伏し拝して言った、「わが主は何をしもべに告げようとされるのですか」。
೧೪ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು
15 すると主の軍勢の将はヨシュアに言った、「あなたの足のくつを脱ぎなさい。あなたが立っている所は聖なる所である」。ヨシュアはそのようにした。
೧೫ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.