< 士師記 15 >
1 日がたって後、麦刈の時にサムソンは子やぎを携えて妻をおとずれ、「へやにはいって、妻に会いましょう」と言ったが、妻の父ははいることを許さなかった。
೧ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;
2 そして父は言った、「あなたが確かに彼女をきらったに相違ないと思ったので、わたしは彼女をあなたの客であった者にやりました。彼女の妹は彼女よりもきれいではありませんか。どうぞ、彼女の代りに妹をめとってください」。
೨ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು.
3 サムソンは彼らに言った、「今度はわたしがペリシテびとに害を加えても、彼らのことでは、わたしに罪がない」。
೩ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ
4 そこでサムソンは行って、きつね三百匹を捕え、たいまつをとり、尾と尾をあわせて、その二つの尾の間に一つのたいまつを結びつけ、
೪ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,
5 たいまつに火をつけて、そのきつねをペリシテびとのまだ刈らない麦の中に放し入れ、そのたばね積んだものと、まだ刈らないものとを焼き、オリブ畑をも焼いた。
೫ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.
6 ペリシテびとは言った、「これはだれのしわざか」。人々は言った、「テムナびとの婿サムソンだ。そのしゅうとがサムソンの妻を取り返して、その客であった者に与えたからだ」。そこでペリシテびとは上ってきて彼女とその父の家を火で焼き払った。
೬ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.
7 サムソンは彼らに言った、「あなたがたがそんなことをするならば、わたしはあなたがたに仕返しせずにはおかない」。
೭ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ
8 そしてサムソンは彼らを、さんざんに撃って大ぜい殺した。こうしてサムソンは下って行って、エタムの岩の裂け目に住んでいた。
೮ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.
9 そこでペリシテびとは上ってきて、ユダに陣を取り、レヒを攻めたので、
೯ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.
10 ユダの人々は言った、「あなたがたはどうしてわれわれのところに攻めのぼってきたのですか」。彼らは言った、「われわれはサムソンを縛り、彼がわれわれにしたように、彼にするために上ってきたのです」。
೧೦ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು.
11 そこでユダの人々三千人がエタムの岩の裂け目に下って行って、サムソンに言った、「ペリシテびとはわれわれの支配者であることをあなたは知らないのですか。あなたはどうしてわれわれにこんな事をしたのですか」。サムソンは彼らに言った、「彼らがわたしにしたように、わたしは彼らにしたのです」。
೧೧ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.
12 彼らはまたサムソンに言った、「われわれはあなたを縛って、ペリシテびとの手にわたすために下ってきたのです」。サムソンは彼らに言った、「あなたがた自身はわたしを撃たないということを誓いなさい」。
೧೨ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.
13 彼らはサムソンに言った、「いや、われわれはただ、あなたを縛って、ペリシテびとの手にわたすだけです。決してあなたを殺しません」。彼らは二本の新しい綱をもって彼を縛って、岩からひきあげた。
೧೩ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು.
14 サムソンがレヒにきたとき、ペリシテびとは声をあげて、彼に近づいた。その時、主の霊が激しく彼に臨んだので、彼の腕にかかっていた綱は火に焼けた亜麻のようになって、そのなわめが手から解けて落ちた。
೧೪ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.
15 彼はろばの新しいあご骨一つを見つけたので、手を伸べて取り、それをもって一千人を打ち殺した。
೧೫ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,
16 そしてサムソンは言った、「ろばのあご骨をもって山また山を築き、ろばのあご骨をもって一千人を打ち殺した」。
೧೬“ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ,
17 彼は言い終ると、その手からあご骨を投げすてた。これがためにその所は「あご骨の丘」と呼ばれた。
೧೭ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.
18 時に彼はひどくかわきを覚えたので、主に呼ばわって言った、「あなたはしもべの手をもって、この大きな救を施されたのに、わたしは今、かわいて死に、割礼をうけないものの手に陥ろうとしています」。
೧೮ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು
19 そこで神はレヒにあるくぼんだ所を裂かれたので、そこから水が流れ出た。サムソンがそれを飲むと彼の霊はもとにかえって元気づいた。それでその名を「呼ばわった者の泉」と呼んだ。これは今日までレヒにある。
೧೯ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
20 サムソンはペリシテびとの時代に二十年の間イスラエルをさばいた。
೨೦ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.