< レビ記 16 >
1 アロンのふたりの子が、主の前に近づいて死んだ後、
೧ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
2 主はモーセに言われた、「あなたの兄弟アロンに告げて、彼が時をわかたず、垂幕の内なる聖所に入り、箱の上なる贖罪所の前に行かぬようにさせなさい。彼が死を免れるためである。なぜなら、わたしは雲の中にあって贖罪所の上に現れるからである。
೨“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.
3 アロンが聖所に、はいるには、次のようにしなければならない。すなわち雄の子牛を罪祭のために取り、雄羊を燔祭のために取り、
೩ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
4 聖なる亜麻布の服を着、亜麻布のももひきをその身にまとい、亜麻布の帯をしめ、亜麻布の帽子をかぶらなければならない。これらは聖なる衣服である。彼は水に身をすすいで、これを着なければならない。
೪ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.
5 またイスラエルの人々の会衆から雄やぎ二頭を罪祭のために取り、雄羊一頭を燔祭のために取らなければならない。
೫ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
6 そしてアロンは自分のための罪祭の雄牛をささげて、自分と自分の家族のために、あがないをしなければならない。
೬ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
7 アロンはまた二頭のやぎを取り、それを会見の幕屋の入口で主の前に立たせ、
೭ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
8 その二頭のやぎのために、くじを引かなければならない。すなわち一つのくじは主のため、一つのくじはアザゼルのためである。
೮ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.
9 そしてアロンは主のためのくじに当ったやぎをささげて、これを罪祭としなければならない。
೯ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
10 しかし、アザゼルのためのくじに当ったやぎは、主の前に生かしておき、これをもって、あがないをなし、これをアザゼルのために、荒野に送らなければならない。
೧೦ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.
11 すなわち、アロンは自分のための罪祭の雄牛をささげて、自分と自分の家族のために、あがないをしなければならない。彼は自分のための罪祭の雄牛をほふり、
೧೧“ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.
12 主の前の祭壇から炭火を満たした香炉と、細かくひいた香ばしい薫香を両手いっぱい取って、これを垂幕の内に携え入り、
೧೨ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.
13 主の前で薫香をその火にくべ、薫香の雲に、あかしの箱の上なる贖罪所をおおわせなければならない。こうして、彼は死を免れるであろう。
೧೩ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.
14 彼はまたその雄牛の血を取り、指をもってこれを贖罪所の東の面に注ぎ、また指をもってその血を贖罪所の前に、七たび注がなければならない。
೧೪ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.
15 また民のための罪祭のやぎをほふり、その血を垂幕の内に携え入り、その血をかの雄牛の血のように、贖罪所の上と、贖罪所の前に注ぎ、
೧೫“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.
16 イスラエルの人々の汚れと、そのとが、すなわち、彼らのもろもろの罪のゆえに、聖所のためにあがないをしなければならない。また彼らの汚れのうちに、彼らと共にある会見の幕屋のためにも、そのようにしなければならない。
೧೬ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.
17 彼が聖所であがないをするために、はいった時は、自分と自分の家族と、イスラエルの全会衆とのために、あがないをなし終えて出るまで、だれも会見の幕屋の内にいてはならない。
೧೭ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.
18 そして彼は主の前の祭壇のもとに出てきて、これがために、あがないをしなければならない、すなわち、かの雄牛の血と、やぎの血とを取って祭壇の四すみの角につけ、
೧೮ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
19 また指をもって七たびその血をその上に注ぎ、イスラエルの人々の汚れを除いてこれを清くし、聖別しなければならない。
೧೯ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.
20 こうして聖所と会見の幕屋と祭壇とのために、あがないをなし終えたとき、かの生きているやぎを引いてこなければならない。
೨೦“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.
21 そしてアロンは、その生きているやぎの頭に両手をおき、イスラエルの人々のもろもろの悪と、もろもろのとが、すなわち、彼らのもろもろの罪をその上に告白して、これをやぎの頭にのせ、定めておいた人の手によって、これを荒野に送らなければならない。
೨೧ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
22 こうしてやぎは彼らのもろもろの悪をになって、人里離れた地に行くであろう。すなわち、そのやぎを荒野に送らなければならない。
೨೨ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.
23 そして、アロンは会見の幕屋に入り、聖所に入る時に着た亜麻布の衣服を脱いで、そこに置き、
೨೩“ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.
24 聖なる所で水に身をすすぎ、他の衣服を着、出てきて、自分の燔祭と民の燔祭とをささげて、自分のため、また民のために、あがないをしなければならない。
೨೪ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.
25 また罪祭の脂肪を祭壇の上で焼かなければならない。
೨೫ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.
26 かのやぎをアザゼルに送った者は衣服を洗い、水に身をすすがなければならない。その後、宿営に入ることができる。
೨೬“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.
27 聖所で、あがないをするために、その血を携え入れられた罪祭の雄牛と、罪祭のやぎとは、宿営の外に携え出し、その皮と肉と汚物とは、火で焼き捨てなければならない。
೨೭ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.
28 これを焼く者は衣服を洗い、水に身をすすがなければならない。その後、宿営に入ることができる。
೨೮ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.
29 これはあなたがたが永久に守るべき定めである。すなわち、七月になって、その月の十日に、あなたがたは身を悩まし、何の仕事もしてはならない。この国に生れた者も、あなたがたのうちに宿っている寄留者も、そうしなければならない。
೨೯“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
30 この日にあなたがたのため、あなたがたを清めるために、あがないがなされ、あなたがたは主の前に、もろもろの罪が清められるからである。
೩೦ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
31 これはあなたがたの全き休みの安息日であって、あなたがたは身を悩まさなければならない。これは永久に守るべき定めである。
೩೧ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.
32 油を注がれ、父に代って祭司の職に任じられる祭司は、亜麻布の衣服、すなわち、聖なる衣服を着て、あがないをしなければならない。
೩೨“ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.
33 彼は至聖所のために、あがないをなし、また会見の幕屋のためと、祭壇のために、あがないをなし、また祭司たちのためと、民の全会衆のために、あがないをしなければならない。
೩೩ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
34 これはあなたがたの永久に守るべき定めであって、イスラエルの人々のもろもろの罪のために、年に一度あがないをするものである」。彼は主がモーセに命じられたとおりにおこなった。
೩೪ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.