< レビ記 17 >

1 主はまたモーセに言われた、
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2 「アロンとその子たち、およびイスラエルのすべての人々に言いなさい、『主が命じられることはこれである。すなわち
“ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,
3 イスラエルの家のだれでも、牛、羊あるいは、やぎを宿営の内でほふり、または宿営の外でほふり、
ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,
4 それを会見の幕屋の入口に携えてきて主の幕屋の前で、供え物として主にささげないならば、その人は血を流した者とみなされる。彼は血を流したゆえ、その民のうちから断たれるであろう。
ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
5 これはイスラエルの人々に、彼らが野のおもてでほふるのを常としていた犠牲を主のもとにひいてこさせ、会見の幕屋の入口におる祭司のもとにきて、これを主にささげる酬恩祭の犠牲としてほふらせるためである。
ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
6 祭司はその血を会見の幕屋の入口にある主の祭壇に注ぎかけ、またその脂肪を焼いて香ばしいかおりとし、主にささげなければならない。
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
7 彼らが慕って姦淫をおこなったみだらな神に、再び犠牲をささげてはならない。これは彼らが代々ながく守るべき定めである』。
ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
8 あなたはまた彼らに言いなさい、『イスラエルの家の者、またはあなたがたのうちに宿る寄留者のだれでも、燔祭あるいは犠牲をささげるのに、
“ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,
9 これを会見の幕屋の入口に携えてきて、主にささげないならば、その人は、その民のうちから断たれるであろう。
ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
10 イスラエルの家の者、またはあなたがたのうちに宿る寄留者のだれでも、血を食べるならば、わたしはその血を食べる人に敵して、わたしの顔を向け、これをその民のうちから断つであろう。
೧೦“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
11 肉の命は血にあるからである。あなたがたの魂のために祭壇の上で、あがないをするため、わたしはこれをあなたがたに与えた。血は命であるゆえに、あがなうことができるからである。
೧೧ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
12 このゆえに、わたしはイスラエルの人々に言った。あなたがたのうち、だれも血を食べてはならない。またあなたがたのうちに宿る寄留者も血を食べてはならない。
೧೨ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.
13 イスラエルの人々のうち、またあなたがたのうちに宿る寄留者のうち、だれでも、食べてもよい獣あるいは鳥を狩り獲た者は、その血を注ぎ出し、土でこれをおおわなければならない。
೧೩“‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
14 すべて肉の命は、その血と一つだからである。それで、わたしはイスラエルの人々に言った。あなたがたは、どんな肉の血も食べてはならない。すべて肉の命はその血だからである。すべて血を食べる者は断たれるであろう。
೧೪ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
15 自然に死んだもの、または裂き殺されたものを食べる人は、国に生れた者であれ、寄留者であれ、その衣服を洗い、水に身をすすがなければならない。彼は夕まで汚れているが、その後、清くなるであろう。
೧೫“‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
16 もし、洗わず、また身をすすがないならば、彼はその罪を負わなければならない』」。
೧೬ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.

< レビ記 17 >