< レビ記 20 >

1 主はまたモーセに言われた、
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2 「イスラエルの人々に言いなさい、『イスラエルの人々のうち、またイスラエルのうちに寄留する他国人のうち、だれでもその子供をモレクにささげる者は、必ず殺されなければならない。すなわち、国の民は彼を石で撃たなければならない。
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
3 わたしは顔をその人に向け、彼を民のうちから断つであろう。彼がその子供をモレクにささげてわたしの聖所を汚し、またわたしの聖なる名を汚したからである。
ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
4 その人が子供をモレクにささげるとき、国の民がもしことさらに、この事に目をおおい、これを殺さないならば、
ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,
5 わたし自身、顔をその人とその家族とに向け、彼および彼に見ならってモレクを慕い、これと姦淫する者を、すべて民のうちから断つであろう。
ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
6 もし口寄せ、または占い師のもとにおもむき、彼らを慕って姦淫する者があれば、わたしは顔をその人に向け、これを民のうちから断つであろう。
“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
7 ゆえにあなたがたは、みずからを聖別し、聖なる者とならなければならない。わたしはあなたがたの神、主である。
ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
8 あなたがたはわたしの定めを守って、これを行わなければならない。わたしはあなたがたを聖別する主である。
ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
9 だれでも父または母をのろう者は、必ず殺されなければならない。彼が父または母をのろったので、その血は彼に帰するであろう。
“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
10 人の妻と姦淫する者、すなわち隣人の妻と姦淫する者があれば、その姦夫、姦婦は共に必ず殺されなければならない。
೧೦“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
11 その父の妻と寝る者は、その父をはずかしめる者である。彼らはふたりとも必ず殺されなければならない。その血は彼らに帰するであろう。
೧೧ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
12 子の妻と寝る者は、ふたり共に必ず殺されなければならない。彼らは道ならぬことをしたので、その血は彼らに帰するであろう。
೧೨ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13 女と寝るように男と寝る者は、ふたりとも憎むべき事をしたので、必ず殺されなければならない。その血は彼らに帰するであろう。
೧೩ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
14 女をその母と一緒にめとるならば、これは悪事であって、彼も、女たちも火に焼かれなければならない。このような悪事をあなたがたのうちになくするためである。
೧೪ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
15 男がもし、獣と寝るならば彼は必ず殺されなければならない。あなたがたはまた、その獣を殺さなければならない。
೧೫ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
16 女がもし、獣に近づいて、これと寝るならば、あなたは、その女と獣とを殺さなければならない。彼らは必ず殺さるべきである。その血は彼らに帰するであろう。
೧೬ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.
17 人がもし、その姉妹、すなわち父の娘、あるいは母の娘に近づいて、その姉妹のはだを見、女はその兄弟のはだを見るならば、これは恥ずべき事である。彼らは、その民の人々の目の前で、断たれなければならない。彼は、その姉妹を犯したのであるから、その罪を負わなければならない。
೧೭ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
18 人がもし、月のさわりのある女と寝て、そのはだを現すならば、男は女の源を現し、女は自分の血の源を現したのであるから、ふたり共にその民のうちから断たれなければならない。
೧೮ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
19 あなたの母の姉妹、またはあなたの父の姉妹を犯してはならない。これは、自分の肉親の者を犯すことであるから、彼らはその罪を負わなければならない。
೧೯ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
20 人がもし、そのおばと寝るならば、これはおじをはずかしめることであるから、彼らはその罪を負い、子なくして死ぬであろう。
೨೦ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
21 人がもし、その兄弟の妻を取るならば、これは汚らわしいことである。彼はその兄弟をはずかしめたのであるから、彼らは子なき者となるであろう。
೨೧ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
22 あなたがたはわたしの定めとおきてとをことごとく守って、これを行わなければならない。そうすれば、わたしがあなたがたを住まわせようと導いて行く地は、あなたがたを吐き出さぬであろう。
೨೨“‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
23 あなたがたの前からわたしが追い払う国びとの風習に、あなたがたは歩んではならない。彼らは、このもろもろのことをしたから、わたしは彼らを憎むのである。
೨೩ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
24 わたしはあなたがたに言った、「あなたがたは、彼らの地を獲るであろう。わたしはこれをあなたがたに与えて、これを獲させるであろう。これは乳と蜜との流れる地である」。わたしはあなたがたを他の民から区別したあなたがたの神、主である。
೨೪ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
25 あなたがたは清い獣と汚れた獣、汚れた鳥と清い鳥を区別しなければならない。わたしがあなたがたのために汚れたものとして区別した獣、または鳥またはすべて地を這うものによって、あなたがたの身を忌むべきものとしてはならない。
೨೫“‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
26 あなたがたはわたしに対して聖なる者でなければならない。主なるわたしは聖なる者で、あなたがたをわたしのものにしようと、他の民から区別したからである。
೨೬ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
27 男または女で、口寄せ、または占いをする者は、必ず殺されなければならない。すなわち、石で撃ち殺さなければならない。その血は彼らに帰するであろう』」。
೨೭“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

< レビ記 20 >