< ミカ書 3 >
1 わたしは言った、ヤコブのかしらたちよ、イスラエルの家のつかさたちよ、聞け、公義はあなたがたの知っておるべきことではないか。
೧ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?
2 あなたがたは善を憎み、悪を愛し、わが民の身から皮をはぎ、その骨から肉をそぎ、
೨ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ.
3 またわが民の肉を食らい、その皮をはぎ、その骨を砕き、これを切りきざんで、なべに入れる食物のようにし、大なべに入れる肉のようにする。
೩ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.
4 こうして彼らが主に呼ばわっても、主はお答えにならない。かえってその時には、み顔を彼らに隠される。彼らのおこないが悪いからである。
೪ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”
5 わが民を惑わす預言者について主はこう言われる、彼らは食べ物のある時には、「平安」を叫ぶけれども、その口に何も与えない者にむかっては、宣戦を布告する。
೫ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,
6 それゆえ、あなたがたには夜があっても幻がなく、暗やみがあっても占いがない。太陽はその預言者たちに没し、昼も彼らの上に暗くなる。
೬“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
7 先見者は恥をかき、占い師は顔をあからめ、彼らは皆そのくちびるをおおう。神の答がないからである。
೭ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.
8 しかしわたしは主のみたまによって力に満ち、公義と勇気とに満たされ、ヤコブにそのとがを示し、イスラエルにその罪を示すことができる。
೮ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
9 ヤコブの家のかしらたち、イスラエルの家のつかさたちよ、すなわち公義を憎み、すべての正しい事を曲げる者よ、これを聞け。
೯ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,
10 あなたがたは血をもってシオンを建て、不義をもってエルサレムを建てた。
೧೦ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.
11 そのかしらたちは、まいないをとってさばき、その祭司たちは価をとって教え、その預言者たちは金をとって占う。しかもなお彼らは主に寄り頼んで、「主はわれわれの中におられるではないか、だから災はわれわれに臨むことがない」と言う。
೧೧ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
12 それゆえ、シオンはあなたがたのゆえに田畑となって耕され、エルサレムは石塚となり、宮の山は木のおい茂る高い所となる。
೧೨ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.