< ミカ書 4 >
1 末の日になって、主の家の山はもろもろの山のかしらとして堅く立てられ、もろもろの峰よりも高くあげられ、もろもろの民はこれに流れくる。
೧ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
2 多くの国民は来て言う、「さあ、われわれは主の山に登り、ヤコブの神の家に行こう。彼はその道をわれわれに教え、われわれはその道に歩もう」と。律法はシオンから出、主の言葉はエルサレムから出るからである。
೨ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.
3 彼は多くの民の間をさばき、遠い所まで強い国々のために仲裁される。そこで彼らはつるぎを打ちかえて、すきとし、そのやりを打ちかえて、かまとし、国は国にむかってつるぎをあげず、再び戦いのことを学ばない。
೩ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
4 彼らは皆そのぶどうの木の下に座し、そのいちじくの木の下にいる。彼らを恐れさせる者はない。これは万軍の主がその口で語られたことである。
೪ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
5 すべての民はおのおのその神の名によって歩む。しかしわれわれはわれわれの神、主の名によって、とこしえに歩む。
೫ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.
6 主は言われる、その日には、わたしはかの足のなえた者を集め、またかの追いやられた者およびわたしが苦しめた者を集め、
೬ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.
7 その足のなえた者を残れる民とし、遠く追いやられた者を強い国民とする。主はシオンの山で、今よりとこしえに彼らを治められる。
೭ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
8 羊の群れのやぐら、シオンの娘の山よ、以前の主権はあなたに帰ってくる。すなわちエルサレムの娘の国はあなたに帰ってくる。
೮ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.
9 今あなたは何ゆえわめき叫ぶのか、あなたのうちに王がないのか。あなたの相談相手は絶えはて、産婦のように激しい痛みがあなたを捕えたのか。
೯ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?
10 シオンの娘よ、産婦のように苦しんでうめけ。あなたは今、町を出て野にやどり、バビロンに行かなければならない。その所であなたは救われる。主はその所であなたを敵の手からあがなわれる。
೧೦ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.
11 いま多くの国民はあなたに逆らい、集まって言う、「どうかシオンが汚されるように、われわれの目がシオンを見てあざ笑うように」と。
೧೧‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
12 しかし彼らは主の思いを知らず、またその計画を悟らない。すなわち主が麦束を打ち場に集めるように、彼らを集められることを悟らない。
೧೨ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.
13 シオンの娘よ、立って打ちこなせ。わたしはあなたの角を鉄となし、あなたのひずめを青銅としよう。あなたは多くの民を打ち砕き、彼らのぶんどり物を主にささげ、彼らの富を全地の主にささげる。
೧೩ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.