< ネヘミヤ 記 6 >

1 サンバラテ、トビヤ、アラビヤびとガシムおよびその他のわれわれの敵は、わたしが城壁を築き終って、一つの破れも残らないと聞いた。(しかしその時にはまだ門のとびらをつけていなかったのである。)
ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.
2 そこでサンバラテとガシムはわたしに使者をつかわして言った、「さあ、われわれはオノの平野にある一つの村で会見しよう」と。彼らはわたしに危害を加えようと考えていたのである。
ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.
3 それでわたしは彼らに使者をつかわして言わせた、「わたしは大いなる工事をしているから下って行くことはできない。どうしてこの工事をさしおいて、あなたがたの所へ下って行き、その間、工事をやめることができようか」。
ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.
4 彼らは四度までこのようにわたしに人をつかわしたが、わたしは同じように彼らに答えた。
ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.
5 ところが、サンバラテは五度目にそのしもべを前のようにわたしにつかわした。その手には開封の手紙を携えていた。
ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
6 その中に次のようにしるしてあった、「諸国民の間に言い伝えられ、またガシムも言っているが、あなたはユダヤ人と共に反乱を企て、これがために城壁を築いている。またその言うところによれば、あなたは彼らの王になろうとしている。
ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.
7 またあなたは預言者を立てて、あなたのことをエルサレムにのべ伝えさせ、『ユダに王がある』と言わせているが、そのことはこの言葉のとおり王に聞えるでしょう。それゆえ、今おいでなさい。われわれは共に相談しましょう」。
ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
8 そこでわたしは彼に人をつかわして言わせた、「あなたの言うようなことはしていません。あなたはそれを自分の心から造り出したのです」と。
ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.
9 彼らはみな「彼らの手が弱って工事をやめるようになれば、工事は成就しないだろう」と考えて、われわれをおどそうとしたのである。しかし神よ、どうぞいまわたしの手を強めてください。
ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು
10 さてわたしはメヘタベルの子デラヤの子シマヤの家に行ったところ、彼は閉じこもっていて言った、「われわれは神の宮すなわち神殿の中で会合し、神殿の戸を閉じておきましょう。彼らはあなたを殺そうとして来るからです。きっと夜のうちにあなたを殺そうとして来るでしょう」。
೧೦ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.
11 わたしは言った、「わたしのような者がどうして逃げられよう。わたしのような者でだれが神殿にはいって命を全うすることができよう。わたしははいらない」。
೧೧ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
12 わたしは悟った。神が彼をつかわされたのではない。彼がわたしにむかってこの預言を伝えたのは、トビヤとサンバラテが彼を買収したためである。
೧೨ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
13 彼が買収されたのはこの事のためである。すなわちわたしを恐れさせ、わたしにこのようにさせて、罪を犯させ、わたしに悪名をきせて侮辱するためであった。
೧೩ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.
14 わが神よ、トビヤ、サンバラテおよび女預言者ノアデヤならびにその他の預言者など、すべてわたしを恐れさせようとする者たちをおぼえて、彼らが行ったこれらのわざに報いてください。
೧೪ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.
15 こうして城壁は五十二日を経て、エルルの月の二十五日に完成した。
೧೫ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
16 われわれの敵が皆これを聞いた時、われわれの周囲の異邦人はみな恐れ、大いに面目を失った。彼らはこの工事が、われわれの神の助けによって成就したことを悟ったからである。
೧೬ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.
17 またそのころ、ユダの尊い人々は多くの手紙をトビヤに送った。トビヤの手紙もまた彼らにきた。
೧೭ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.
18 トビヤはアラの子シカニヤの婿であったので、ユダのうちの多くの者が彼と誓いを立てていたからである。トビヤの子ヨハナンもベレキヤの子メシュラムの娘を妻にめとった。
೧೮ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.
19 彼らはまたトビヤの善行をわたしの前に語り、またわたしの言葉を彼に伝えた。トビヤはたびたび手紙を送って、わたしを恐れさせようとした。
೧೯ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

< ネヘミヤ 記 6 >