< 民数記 33 >
1 イスラエルの人々が、モーセとアロンとに導かれ、その部隊に従って、エジプトの国を出てから経た旅路は次のとおりである。
೧ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
2 モーセは主の命により、その旅路にしたがって宿駅を書きとめた。その宿駅にしたがえば旅路は次のとおりである。
೨ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.
3 彼らは正月の十五日にラメセスを出立した。すなわち過越の翌日イスラエルの人々は、すべてのエジプトびとの目の前を意気揚々と出立した。
೩ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
4 その時エジプトびとは、主に撃ち殺されたすべてのういごを葬っていた。主はまた彼らの神々にも罰を加えられた。
೪ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.
5 こうしてイスラエルの人々はラメセスを出立してスコテに宿営し、
೫ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.
6 スコテを出立して荒野の端にあるエタムに宿営し、
೬ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
7 エタムを出立してバアル・ゼポンの前にあるピハヒロテに引き返してミグドルの前に宿営し、
೭ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.
8 ピハヒロテを出立して、海のなかをとおって荒野に入り、エタムの荒野を三日路ほど行って、メラに宿営し、
೮ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
9 メラを出立し、エリムに行って宿営した。エリムには水の泉十二と、なつめやし七十本とがあった。
೯ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು.
೧೦ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.
೧೧ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.
೧೨ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
೧೩ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.
14 アルシを出立してレピデムに宿営した。そこには民の飲む水がなかった。
೧೪ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
೧೫ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
16 シナイの荒野を出立してキブロテ・ハッタワに宿営し、
೧೬ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
17 キブロテ・ハッタワを出立してハゼロテに宿営し、
೧೭ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
೧೮ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
೧೯ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
೨೦ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
೨೧ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
೨೨ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.
೨೩ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.
೨೪ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.
೨೫ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
೨೬ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
೨೭ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
೨೮ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
೨೯ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
೩೦ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
೩೧ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
32 ベネヤカンを出立してホル・ハギデガデに宿営し、
೩೨ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
33 ホル・ハギデガデを出立してヨテバタに宿営し、
೩೩ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
೩೪ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
35 アブロナを出立してエジオン・ゲベルに宿営し、
೩೫ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
36 エジオン・ゲベルを出立してチンの荒野すなわちカデシに宿営し、
೩೬ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
37 カデシを出立してエドムの国の端にあるホル山に宿営した。
೩೭ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
38 イスラエルの人々がエジプトの国を出て四十年目の五月一日に、祭司アロンは主の命によりホル山に登って、その所で死んだ。
೩೮ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
39 アロンはホル山で死んだとき百二十三歳であった。
೩೯ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
40 カナンの地のネゲブに住んでいたカナンびとアラデの王は、イスラエルの人々の来るのを聞いた。
೪೦ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
೪೧ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
೪೨ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
೪೩ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
44 オボテを出立してモアブの境にあるイエ・アバリムに宿営し、
೪೪ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
45 イエ・アバリムを出立してデボン・ガドに宿営し、
೪೫ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
46 デボン・ガドを出立してアルモン・デブラタイムに宿営し、
೪೬ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
47 アルモン・デブラタイムを出立してネボの前にあるアバリムの山に宿営し、
೪೭ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.
48 アバリムの山を出立してエリコに近いヨルダンのほとりのモアブの平野に宿営した。
೪೮ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
49 すなわちヨルダンのほとりのモアブの平野で、ベテエシモテとアベル・シッテムとの間に宿営した。
೪೯ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
50 エリコに近いヨルダンのほとりのモアブの平野で、主はモーセに言われた、
೫೦ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
51 「イスラエルの人々に言いなさい。あなたがたがヨルダンを渡ってカナンの地にはいるときは、
೫೧“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,
52 その地の住民をことごとくあなたがたの前から追い払い、すべての石像をこぼち、すべての鋳像をこぼち、すべての高き所を破壊しなければならない。
೫೨ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
53 またあなたがたはその地の民を追い払って、そこに住まなければならない。わたしがその地をあなたがたの所有として与えたからである。
೫೩ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
54 あなたがたは、おのおの氏族ごとにくじを引き、その地を分けて嗣業としなければならない。大きい部族には多くの嗣業を与え、小さい部族には少しの嗣業を与えなければならない。そのくじの当った所がその所有となるであろう。あなたがたは父祖の部族にしたがって、それを継がなければならない。
೫೪ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
55 しかし、その地の住民をあなたがたの前から追い払わないならば、その残して置いた者はあなたがたの目にとげとなり、あなたがたの脇にいばらとなり、あなたがたの住む国において、あなたがたを悩ますであろう。
೫೫ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
56 また、わたしは彼らにしようと思ったとおりに、あなたがたにするであろう」。
೫೬ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”