< 民数記 36 >

1 ヨセフの子孫の氏族のうち、マナセの子マキルの子であるギレアデの子らの氏族のかしらたちがきて、モーセとイスラエルの人々のかしらであるつかさたちとの前で語って、
ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
2 言った、「イスラエルの人々に、その嗣業の地をくじによって与えることを主はあなたに命じられ、あなたもまた、われわれの兄弟ゼロペハデの嗣業を、その娘たちに与えるよう、主によって命じられました。
“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
3 その娘たちがもし、イスラエルの人々のうちの他の部族のむすこたちにとつぐならば、彼女たちの嗣業は、われわれの父祖の嗣業のうちから取り除かれて、そのとつぐ部族の嗣業に加えられるでしょう。こうしてそれはわれわれの嗣業の分から取り除かれるでしょう。
ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
4 そしてイスラエルの人々のヨベルの年がきた時、彼女たちの嗣業は、そのとついだ部族の嗣業に加えられるでしょう。こうして彼女たちの嗣業は、われわれの父祖の部族の嗣業のうちから取り除かれるでしょう」。
ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
5 モーセは主の言葉にしたがって、イスラエルの人々に命じて言った、「ヨセフの子孫の部族の言うところは正しい。
ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, “ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.
6 ゼロペハデの娘たちについて、主が命じられたことはこうである。すなわち『彼女たちはその心にかなう者にとついでもよいが、ただその父祖の部族の一族にのみ、とつがなければならない。
ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
7 そうすればイスラエルの人々の嗣業は、部族から部族に移るようなことはないであろう。イスラエルの人々は、おのおのその父祖の部族の嗣業をかたく保つべきだからである。
ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
8 イスラエルの人々の部族のうち、嗣業をもっている娘はみな、その父の部族に属する一族にとつがなければならない。そうすればイスラエルの人々は、おのおのその父祖の嗣業を保つことができる。
ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.
9 こうして嗣業は一つの部族から他の部族に移ることはなかろう。イスラエルの人々の部族はおのおのその嗣業をかたく保つべきだからである』」。
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
10 そこでゼロペハデの娘たちは、主がモーセに命じられたようにした。
೧೦ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.
11 すなわちゼロペハデの娘たち、マアラ、テルザ、ホグラ、ミルカおよびノアは、その父の兄弟のむすこたちにとついだ。
೧೧ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
12 彼女たちはヨセフの子マナセのむすこたちの一族にとついだので、その嗣業はその父の一族の属する部族にとどまった。
೧೨ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.
13 これらはエリコに近いヨルダンのほとりのモアブの平野で、主がモーセによってイスラエルの人々に命じられた命令とおきてである。
೧೩ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.

< 民数記 36 >