< 民数記 9 >
1 エジプトの国を出た次の年の正月、主はシナイの荒野でモーセに言われた、
೧ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,
2 「イスラエルの人々に、過越の祭を定めの時に行わせなさい。
೨“ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.
3 この月の十四日の夕暮、定めの時に、それを行わなければならない。あなたがたは、そのすべての定めと、そのすべてのおきてにしたがって、それを行わなければならない」。
೩ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು.
4 そこでモーセがイスラエルの人々に、過越の祭を行わなければならないと言ったので、
೪ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.
5 彼らは正月の十四日の夕暮、シナイの荒野で過越の祭を行った。すなわち、イスラエルの人々は、すべて主がモーセに命じられたようにおこなった。
೫ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.
6 ところが人の死体に触れて身を汚したために、その日に過越の祭を行うことのできない人々があって、その日モーセとアロンの前にきて、
೬ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.
7 その人々は彼に言った、「わたしたちは人の死体に触れて身を汚しましたが、なぜその定めの時に、イスラエルの人々と共に、主に供え物をささげることができないのですか」。
೭ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.
8 モーセは彼らに言った、「しばらく待て。主があなたがたについて、どう仰せになるかを聞こう」。
೮ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.
೯ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
10 「イスラエルの人々に言いなさい、『あなたがたのうち、また、あなたがたの子孫のうち、死体に触れて身を汚した人も、遠い旅路にある人も、なお、過越の祭を主に対して行うことができるであろう。
೧೦“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’
11 すなわち、二月の十四日の夕暮、それを行い、種入れぬパンと苦菜を添えて、それを食べなければならない。
೧೧ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
12 これを少しでも朝まで残しておいてはならない。またその骨は一本でも折ってはならない。過越の祭のすべての定めにしたがってこれを行わなければならない。
೧೨ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
13 しかし、その身は清く、旅に出てもいないのに、過越の祭を行わないときは、その人は民のうちから断たれるであろう。このような人は、定めの時に主の供え物をささげないゆえ、その罪を負わなければならない。
೧೩ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.
14 もし他国の人が、あなたがたのうちに寄留していて、主に対して過越の祭を行おうとするならば、過越の祭の定めにより、そのおきてにしたがって、これを行わなければならない。あなたがたは他国の人にも、自国の人にも、同一の定めを用いなければならない』」。
೧೪“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”
15 幕屋を建てた日に、雲は幕屋をおおった。すれはすなわち、あかしの幕屋であって、夕には、幕屋の上に、雲は火のように見えて、朝にまで及んだ。
೧೫ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
16 常にそうであって、昼は雲がそれをおおい、夜は火のように見えた。
೧೬ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.
17 雲が幕屋を離れてのぼる時は、イスラエルの人々は、ただちに道に進んだ。また雲がとどまる所に、イスラエルの人々は宿営した。
೧೭ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
18 すなわち、イスラエルの人々は、主の命によって道に進み、主の命によって宿営し、幕屋の上に雲がとどまっている間は、宿営していた。
೧೮ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.
19 幕屋の上に、日久しく雲のとどまる時は、イスラエルの人々は主の言いつけを守って、道に進まなかった。
೧೯ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
20 また幕屋の上に、雲のとどまる日の少ない時もあったが、彼らは、ただ主の命にしたがって宿営し、主の命にしたがって、道に進んだ。
೨೦ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.
21 また雲は夕から朝まで、とどまることもあったが、朝になって、雲がのぼる時は、彼らは道に進んだ。また昼でも夜でも、雲がのぼる時は、彼らは道に進んだ。
೨೧ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.
22 ふつかでも、一か月でも、あるいはそれ以上でも、幕屋の上に、雲がとどまっている間は、イスラエルの人々は宿営していて、道に進まなかったが、それがのぼると道に進んだ。
೨೨ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.
23 すなわち、彼らは主の命にしたがって宿営し、主の命にしたがって道に進み、モーセによって、主が命じられたとおりに、主の言いつけを守った。
೨೩ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.