< オバデヤ書 1 >
1 オバデヤの幻。主なる神はエドムについてこう言われる、われわれは主から出たおとずれを聞いた。ひとりの使者が諸国民のうちにつかわされて言う、「立てよ、われわれは立ってエドムと戦おう」。
೧ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”
2 見よ、わたしはあなたを国々のうちで小さい者とする。あなたはひどく卑しめられる。
೨ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.
3 岩のはざまにおり、高い所に住む者よ、あなたの心の高ぶりは、あなたを欺いた。あなたは心のうちに言う、「だれがわたしを地に引き下らせる事ができるか」。
೩ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
4 たといあなたは、わしのように高くあがり、星の間に巣を設けても、わたしはそこからあなたを引きおろすと主は言われる。
೪ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.
5 もし盗びとがあなたの所に来、強盗が夜きても、彼らは、ほしいだけ盗むではないか。ああ、あなたは全く滅ぼされてしまう。もしぶどうを集める者があなたの所に来たなら、彼らはなお余りの実を残さないであろうか。
೫ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
6 ああ、エサウはかすめられ、その隠しておいた宝は探り出される。
೬ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?
7 あなたと契約を結んだ人々はみな、あなたを欺き、あなたを国境に追いやった。あなたと同盟を結んだ人々はあなたに勝った。あなたの信頼する友はあなたの下にわなを設けた、しかしその事を悟らない。
೭ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.
8 主は言われる、その日には、わたしはエドムから知者を滅ぼし、エサウの山から悟りを断ち除かないだろうか。
೮ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
9 テマンよ、あなたの勇士は驚き恐れる。人はみな殺されてエサウの山から断ち除かれる。
೯ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.
10 あなたはその兄弟ヤコブに暴虐を行ったので、恥はあなたをおおい、あなたは永遠に断たれる。
೧೦ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
11 あなたが離れて立っていた日、すなわち異邦人がその財宝を持ち去り、外国人がその門におし入り、エルサレムをくじ引きにした日、あなたも彼らのひとりのようであった。
೧೧ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.
12 しかしあなたは自分の兄弟の日、すなわちその災の日をながめていてはならなかった。あなたはユダの人々の滅びの日に、これを喜んではならず、その悩みの日に誇ってはならなかった。
೧೨ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
13 あなたはわが民の災の日に、その門にはいってはならず、その災の日にその苦しみをながめてはならなかった。またその災の日に、その財宝に手をかけてはならなかった。
೧೩ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
14 あなたは分れ道に立って、そののがれる者を切ってはならなかった。あなたは悩みの日にその残った者を敵にわたしてはならなかった。
೧೪ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.
15 主の日が万国の民に臨むのは近い。あなたがしたようにあなたもされる。あなたの報いはあなたのこうべに帰する。
೧೫ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
16 あなたがたがわが聖なる山で飲んだように、周囲のもろもろの民も飲む。すなわち彼らは飲んでよろめき、かつてなかったようになる。
೧೬ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
17 しかしシオンの山には、のがれる者がいて、聖なる所となる。またヤコブの家はその領地を獲る。
೧೭ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
18 ヤコブの家は火となり、ヨセフの家は炎となり、エサウの家はわらとなる。彼らはその中に燃えて、これを焼く。エサウの家には残る者がないようになると主は言われた。
೧೮ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.
19 ネゲブの人々はエサウの山を獲、セフェラの人々はペリシテびとを獲る。また彼らはエフライムの地、およびサマリヤの地を獲、ベニヤミンはギレアデを獲る。
೧೯ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
20 ハラにいるイスラエルの人々の捕われ人は、フェニキヤをザレパテまで取り、セパラデにいるエルサレムの捕われ人は、ネゲブの町々を獲る。
೨೦ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
21 こうして救う者はシオンの山に上って、エサウの山を治める。そして王国は主のものとなる。
೨೧ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.