< 箴言 知恵の泉 26 >
1 誉が愚かな者にふさわしくないのは、夏に雪が降り、刈入れの時に雨が降るようなものだ。
೧ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ.
2 いわれのないのろいは、飛びまわるすずめや、飛びかけるつばめのようなもので、止まらない。
೨ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
3 馬のためにはむちがあり、ろばのためにはくつわがあり、愚かな者の背のためにはつえがある。
೩ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
4 愚かな者にその愚かさにしたがって答をするな、自分も彼と同じようにならないためだ。
೪ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
5 愚かな者にその愚かさにしたがって答をせよ、彼が自分の目に自らを知恵ある者と見ないためだ。
೫ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
6 愚かな者に託して事を言い送る者は、自分の足を切り去り、身に害をうける。
೬ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
7 あしなえの足は用がない、愚かな者の口には箴言もそれにひとしい。
೭ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
8 誉を愚かな者に与えるのは、石を石投げにつなぐようだ。
೮ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
9 愚かな者の口に箴言があるのは、酔った者が、とげのあるつえを手で振り上げるようだ。
೯ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
10 通りがかりの愚か者や、酔った者を雇う者は、すべての人を傷つける射手のようだ。
೧೦ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
11 犬が帰って来てその吐いた物を食べるように、愚かな者はその愚かさをくり返す。
೧೧ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
12 自分の目に自らを知恵ある者とする人を、あなたは見るか、彼よりもかえって愚かな人に望みがある。
೧೨ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
13 なまけ者は、「道にししがいる、ちまたにししがいる」という。
೧೩“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
14 戸がちょうつがいによって回るように、なまけ者はその寝床で寝返りをする。
೧೪ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.
15 なまけ者は手を皿に入れても、それを口に持ってゆくことをいとう。
೧೫ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
16 なまけ者は自分の目に、良く答えることのできる七人の者よりも、自らを知恵ありとする。
೧೬ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
17 自分に関係のない争いにたずさわる者は、通りすぎる犬の耳をとらえる者のようだ。
೧೭ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
೧೮ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
19 隣り人を欺いて、「わたしはただ戯れにした」という者は、燃え木または矢、または死を、投げつける気違いのようだ。
೧೯ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
20 たきぎがなければ火は消え、人のよしあしを言う者がなければ争いはやむ。
೨೦ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
21 おき火に炭をつぎ、火にたきぎをくべるように、争いを好む人は争いの火をおこす。
೨೧ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.
22 人のよしあしをいう者の言葉はおいしい食物のようで、腹の奥にしみこむ。
೨೨ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.
23 くちびるはなめらかであっても、心の悪いのは上ぐすりをかけた土の器のようだ。
೨೩ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
24 憎む者はくちびるをもって自ら飾るけれども、心のうちには偽りをいだく。
೨೪ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
25 彼が声をやわらげて語っても、信じてはならない。その心に七つの憎むべきものがあるからだ。
೨೫ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
26 たとい偽りをもってその憎しみをかくしても、彼の悪は会衆の中に現れる。
೨೬ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.
27 穴を掘る者は自らその中に陥る、石をまろばしあげる者の上に、その石はまろびかえる。
೨೭ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.
28 偽りの舌は自分が傷つけた者を憎み、へつらう口は滅びをきたらせる。
೨೮ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.