< 詩篇 13 >
1 聖歌隊の指揮者によってうたわせたダビデの歌 主よ、いつまでなのですか。とこしえにわたしをお忘れになるのですか。いつまで、み顔をわたしに隠されるのですか。
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
2 いつまで、わたしは魂に痛みを負い、ひねもす心に悲しみをいだかなければならないのですか。いつまで敵はわたしの上にあがめられるのですか。
೨ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
3 わが神、主よ、みそなわして、わたしに答え、わたしの目を明らかにしてください。さもないと、わたしは死の眠りに陥り、
೩ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
4 わたしの敵は「わたしは敵に勝った」と言い、わたしのあだは、わたしの動かされることによって喜ぶでしょう。
೪ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.
5 しかしわたしはあなたのいつくしみに信頼し、わたしの心はあなたの救を喜びます。
೫ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
6 主は豊かにわたしをあしらわれたゆえ、わたしは主にむかって歌います。
೬ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.