< 詩篇 138 >
1 ダビデのうた われはわが心をつくしてなんぢに感謝し もろもろの神のまへにて汝をほめうたはん
೧ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
2 我なんぢのきよき宮にむかひて伏拝み なんぢの仁慈とまこととの故によりて聖名にかんしやせん そは汝そのみことばをもろもろの聖名にまさりて高くしたまひたればなり
೨ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
3 汝わがよばはりし日にわれにこたへ わが霊魂にちからをあたへて雄々しからしめたまへり
೩ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
4 ヱホバよ地のすべての王はなんぢに感謝せん かれらはなんぢの口のもろもろの言をききたればなり
೪ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.
5 かれらはヱホバのもろもろの途についてうたはん ヱホバの榮光おほいなればなり
೫ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
6 ヱホバは高くましませども卑きものを顧みたまふ されど亦おごれるものを遠よりしりたまへり
೬ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
7 縦ひわれ患難のなかを歩むとも汝われをふたたび活し その手をのばしてわが仇のいかりをふせぎ その右の手われをすくひたまふべし
೭ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
8 ヱホバはわれに係れることを全うしたまはん ヱホバよなんぢの憐憫はとこしへにたゆることなし願くはなんぢの手のもろもろの事跡をすてたまふなかれ
೮ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.