< 詩篇 14 >
1 聖歌隊の指揮者によってうたわせたダビデの歌 愚かな者は心のうちに「神はない」と言う。彼らは腐れはて、憎むべき事をなし、善を行う者はない。
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
2 主は天から人の子らを見おろして、賢い者、神をたずね求める者があるかないかを見られた。
೨ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3 彼らはみな迷い、みなひとしく腐れた。善を行う者はない、ひとりもない。
೩ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.
4 すべて悪を行う者は悟りがないのか。彼らは物食うようにわが民をくらい、また主を呼ぶことをしない。
೪ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.
5 その時、彼らは大いに恐れた。神は正しい者のやからと共におられるからである。
೫ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
6 あなたがたは貧しい者の計画をはずかしめようとする。しかし主は彼の避け所である。
೬ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.
7 どうか、シオンからイスラエルの救が出るように。主がその民の繁栄を回復されるとき、ヤコブは喜び、イスラエルは楽しむであろう。
೭ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.