< 詩篇 140 >

1 聖歌隊の指揮者によってうたわせたダビデの歌 主よ、悪しき人々からわたしを助け出し、わたしを守って、乱暴な人々からのがれさせてください。
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.
2 彼らは心のうちに悪い事をはかり、絶えず戦いを起します。
ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ.
3 彼らはへびのようにおのが舌を鋭くし、そのくちびるの下にはまむしの毒があります。 (セラ)
ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. (ಸೆಲಾ)
4 主よ、わたしを保って、悪しき人の手からのがれさせ、わたしを守って、わが足をつまずかせようとする乱暴な人々からのがれさせてください。
ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
5 高ぶる者はわたしのためにわなを伏せ、綱をもって網を張り、道のほとりにわなを設けました。 (セラ)
ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. (ಸೆಲಾ)
6 わたしは主に言います、「あなたはわが神です。主よ、わが願いの声に耳を傾けてください。
ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,
7 わが救の力、主なる神よ、あなたは戦いの日に、わがこうべをおおわれました。
ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
8 主よ、悪しき人の願いをゆるさないでください。その悪しき計画をとげさせないでください。 (セラ)
ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. (ಸೆಲಾ)
9 わたしを囲む者がそのこうべをあげるとき、そのくちびるの害悪で彼らをおおってください。
ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,
10 燃える炭を彼らの上に落してください。彼らを穴に投げ入れ、再び上がることのできないようにしてください。
೧೦ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.
11 悪口を言う者を世に立たせないでください。乱暴な人をすみやかに災に追い捕えさせてください」。
೧೧ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.
12 わたしは主が苦しむ者の訴えをたすけ、貧しい者のために正しいさばきを行われることを知っています。
೧೨ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
13 正しい人は必ずみ名に感謝し、直き人はみ前に住むでしょう。
೧೩ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.

< 詩篇 140 >