< 詩篇 148 >
1 主をほめたたえよ。もろもろの天から主をほめたたえよ。もろもろの高き所で主をほめたたえよ。
ಯೆಹೋವ ದೇವರನ್ನು ಸ್ತುತಿಸಿರಿ. ಆಕಾಶ ಮಂಡಲದಿಂದ ಯೆಹೋವ ದೇವರಿಗೆ ಸ್ತುತಿ ಸಲ್ಲಲಿ! ಮಹೋನ್ನತದ ದೇವರನ್ನು ಸ್ತುತಿಸಿರಿ.
2 その天使よ、みな主をほめたたえよ。その万軍よ、みな主をほめたたえよ。
ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.
3 日よ、月よ、主をほめたたえよ。輝く星よ、みな主をほめたたえよ。
ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.
4 いと高き天よ、天の上にある水よ、主をほめたたえよ。
ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ.
5 これらのものに主のみ名をほめたたえさせよ、これらは主が命じられると造られたからである。
ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.
6 主はこれらをとこしえに堅く定め、越えることのできないその境を定められた。
ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.
7 海の獣よ、すべての淵よ、地から主をほめたたえよ。
ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
8 火よ、あられよ、雪よ、霜よ、み言葉を行うあらしよ、
ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,
9 もろもろの山、すべての丘、実を結ぶ木、すべての香柏よ、
ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
10 野の獣、すべての家畜、這うもの、翼ある鳥よ、
ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,
11 地の王たち、すべての民、君たち、地のすべてのつかさよ、
ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ,
ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ವೃದ್ಧರೇ.
13 彼らをして主のみ名をほめたたえさせよ。そのみ名は高く、たぐいなく、その栄光は地と天の上にあるからである。
ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.
14 主はその民のために一つの角をあげられた。これはすべての聖徒のほめたたえるもの、主に近いイスラエルの人々のほめたたえるものである。主をほめたたえよ。
ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.