< 詩篇 15 >

1 ダビデの歌 主よ、あなたの幕屋にやどるべき者はだれですか、あなたの聖なる山に住むべき者はだれですか。
ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
2 直く歩み、義を行い、心から真実を語る者、
ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
3 その舌をもってそしらず、その友に悪をなさず、隣り人に対するそしりを取りあげず、
ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.
4 その目は神に捨てられた者を卑しめ、主を恐れる者を尊び、誓った事は自分の損害になっても変えることなく、
ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
5 利息をとって金銭を貸すことなく、まいないを取って罪のない者の不利をはかることをしない人である。これらの事を行う者はとこしえに動かされることはない。
ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

< 詩篇 15 >