< 詩篇 20 >

1 聖歌隊の指揮者によってうたわせたダビデの歌 主が悩みの日にあなたに答え、ヤコブの神のみ名があなたを守られるように。
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
2 主が聖所から助けをあなたにおくり、シオンからあなたをささえ、
ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
3 あなたのもろもろの供え物をみ心にとめ、あなたの燔祭をうけられるように。 (セラ)
ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. (ಸೆಲಾ)
4 主があなたの心の願いをゆるし、あなたのはかりごとをことごとく遂げさせられるように。
ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
5 われらがあなたの勝利を喜びうたい、われらの神のみ名によって旗を揚げるように。主があなたの求めをすべて遂げさせられるように。
ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
6 今わたしは知る、主はその油そそがれた者を助けられることを。主はその右の手による大いなる勝利をもってその聖なる天から彼に答えられるであろう。
ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
7 ある者は戦車を誇り、ある者は馬を誇る。しかしわれらは、われらの神、主のみ名を誇る。
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
8 彼らはかがみ、また倒れる。しかしわれらは起きて、まっすぐに立つ。
ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
9 主よ、王に勝利をおさずけください。われらが呼ばわる時、われらにお答えください。
ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.

< 詩篇 20 >