< 詩篇 22 >
1 聖歌隊の指揮者によってあけぼののめじかのしらべにあわせてうたわせたダビデの歌 わが神、わが神、なにゆえわたしを捨てられるのですか。なにゆえ遠く離れてわたしを助けず、わたしの嘆きの言葉を聞かれないのですか。
೧(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
2 わが神よ、わたしが昼よばわっても、あなたは答えられず、夜よばわっても平安を得ません。
೨ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.
3 しかしイスラエルのさんびの上に座しておられるあなたは聖なるおかたです。
೩ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.
4 われらの先祖たちはあなたに信頼しました。彼らが信頼したので、あなたは彼らを助けられました。
೪ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
5 彼らはあなたに呼ばわって救われ、あなたに信頼して恥をうけなかったのです。
೫ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
6 しかし、わたしは虫であって、人ではない。人にそしられ、民に侮られる。
೬ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
7 すべてわたしを見る者は、わたしをあざ笑い、くちびるを突き出し、かしらを振り動かして言う、
೭ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
8 「彼は主に身をゆだねた、主に彼を助けさせよ。主は彼を喜ばれるゆえ、主に彼を救わせよ」と。
೮“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
9 しかし、あなたはわたしを生れさせ、母のふところにわたしを安らかに守られた方です。
೯ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
10 わたしは生れた時から、あなたにゆだねられました。母の胎を出てからこのかた、あなたはわたしの神でいらせられました。
೧೦ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
11 わたしを遠く離れないでください。悩みが近づき、助ける者がないのです。
೧೧ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
12 多くの雄牛はわたしを取り巻き、バシャンの強い雄牛はわたしを囲み、
೧೨ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
13 かき裂き、ほえたけるししのように、わたしにむかって口を開く。
೧೩ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
14 わたしは水のように注ぎ出され、わたしの骨はことごとくはずれ、わたしの心臓は、ろうのように、胸のうちで溶けた。
೧೪ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
15 わたしの力は陶器の破片のようにかわき、わたしの舌はあごにつく。あなたはわたしを死のちりに伏させられる。
೧೫ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
16 まことに、犬はわたしをめぐり、悪を行う者の群れがわたしを囲んで、わたしの手と足を刺し貫いた。
೧೬ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
17 わたしは自分の骨をことごとく数えることができる。彼らは目をとめて、わたしを見る。
೧೭ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
18 彼らは互にわたしの衣服を分け、わたしの着物をくじ引にする。
೧೮ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
19 しかし主よ、遠く離れないでください。わが力よ、速く来てわたしをお助けください。
೧೯ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.
20 わたしの魂をつるぎから、わたしのいのちを犬の力から助け出してください。
೨೦ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
21 わたしをししの口から、苦しむわが魂を野牛の角から救い出してください。
೨೧ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
22 わたしはあなたのみ名を兄弟たちに告げ、会衆の中であなたをほめたたえるでしょう。
೨೨ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
23 主を恐れる者よ、主をほめたたえよ。ヤコブのもろもろのすえよ、主をあがめよ。イスラエルのもろもろのすえよ、主をおじおそれよ。
೨೩ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
24 主が苦しむ者の苦しみをかろんじ、いとわれず、またこれにみ顔を隠すことなく、その叫ぶときに聞かれたからである。
೨೪ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
25 大いなる会衆の中で、わたしのさんびはあなたから出るのです。わたしは主を恐れる者の前で、わたしの誓いを果します。
೨೫ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26 貧しい者は食べて飽くことができ、主を尋ね求める者は主をほめたたえるでしょう。どうか、あなたがたの心がとこしえに生きるように。
೨೬ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
27 地のはての者はみな思い出して、主に帰り、もろもろの国のやからはみな、み前に伏し拝むでしょう。
೨೭ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
28 国は主のものであって、主はもろもろの国民を統べ治められます。
೨೮ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
29 地の誇り高ぶる者はみな主を拝み、ちりに下る者も、おのれを生きながらえさせえない者も、みなそのみ前にひざまずくでしょう。
೨೯ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
30 子々孫々、主に仕え、人々は主のことをきたるべき代まで語り伝え、
೩೦ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
31 主がなされたその救を後に生れる民にのべ伝えるでしょう。
೩೧ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.