< 詩篇 26 >
1 ダビデの歌 主よ、わたしをさばいてください。わたしは誠実に歩み、迷うことなく主に信頼しています。
೧ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
2 主よ、わたしをためし、わたしを試み、わたしの心と思いとを練りきよめてください。
೨ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
3 あなたのいつくしみはわたしの目の前にあり、わたしはあなたのまことによって歩みました。
೩ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4 わたしは偽る人々と共にすわらず、偽善者と交わらず、
೪ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
5 悪を行う者のつどいを憎み、悪しき者と共にすわることをしません。
೫ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.
6 主よ、わたしは手を洗って、罪のないことを示し、あなたの祭壇をめぐって、
೬ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
7 感謝の歌を声高くうたい、あなたのくすしきみわざをことごとくのべ伝えます。
೭ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8 主よ、わたしはあなたの住まわれる家と、あなたの栄光のとどまる所とを愛します。
೮ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
9 どうか、わたしを罪びとと共に、わたしのいのちを、血を流す人々と共に、取り去らないでください。
೯ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
10 彼らの手には悪い企てがあり、彼らの右の手は、まいないで満ちています。
೧೦ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.
11 しかしわたしは誠実に歩みます。わたしをあがない、わたしをあわれんでください。
೧೧ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.
12 わたしの足は平らかな所に立っています。わたしは会衆のなかで主をたたえましょう。
೧೨ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.